ಜಿಲ್ಲಾ ಸುದ್ದಿಗಳು
ಸಂಪನ್ಮೂಲ ಕೇಂದ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಥೀಕ್
ನವನಗರದಲ್ಲಿರುವ ಜಿಲ್ಲಾ ಪಂಚಾಯತ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅಥಿಕ್ ಅವರು ಅಲ್ಲಿನ ಸೌಲಭ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪನ್ಮೂಲ ಕೇಂದ್ರದಲ್ಲಿ ಲೈಬ್ರರಿ, ಸುಸಜ್ಜಿತ ತರಬೇತಿ ಹಾಲ್, ಕಂಪ್ಯೂಟ ಲ್ಯಾನ್ ಹಾಗೂ ವಸತಿ ಸೌಲಭ್ಯವನ್ನು ವೀಕ್ಷಿಸಿದ ಅವರು ಮೆಚ್ಚುಗೆ ವ್ಯಕ್ತೊಡಿಸಿದರು.
ಬಾಗಲಕೋಟೆ:ಜಿಲ್ಲೆಯ ವಿವಿದೆಡೆ ನಡೆದ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹಾಗೂ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅಥಿಕ್ ಪರಿಶೀಲಿಸಿದರು.
ಸೋಮವಾರ ತಾಲೂಕಿನ ತುಳಸಿಗೇರಿ ಗ್ರಾಮದ ಕುವೆಂಪು ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಸಮಾಲೋಚನೆ ನಡೆಸಿ ಶಾಲೆಯ ಆವರಣದಲ್ಲಿ ನಿರ್ಮಿಸಲಾದ ಔಷಧಿ ಮತ್ತು ಪೌಷ್ಟಿಕಾಂಶ ತೋಟವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಅದೇ ರೀತಿ ಬೀಳಗಿ ತಾಲೂಕಿನ ಹೆಗ್ಗೂರ ಆದರ್ಶ ಮಾದರಿ ಶಾಲೆಗೆ ಭೇಟಿ ನೀಡಿದ ಅವರು ಶಾಲೆಯ ಶಾಲೆಯಲ್ಲಿ ಕೈಗೊಂಡ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದರು.
ಹೆಗ್ಗೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಡಿಜಿಟಲ್ ಗ್ರಂಥಾಲಯ ಹಾಗೂ ಮಾದರಿ ಅಂಗನವಾಡಿಗೆ ಭೇಟಿ ನೀಡಿ ವೀಕ್ಷಿಸಿದರು. ಮನ್ನಿಕೇರಿ, ಹೆಗ್ಗೂರ, ಕೊರ್ತಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮೀಷನ್ ಯೋಜನೆಯ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ಮಾಡಿದರು. ಭೇಟಿ ವೇಳೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಉಪಕಾರ್ಯದರ್ಶಿ ಅಮರೇಶ ನಾಯಕ, ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರ ವಿಲಾಸ ರಾಠೋಡ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ ಕಲ್ಲಾಪೂರ, ನಕ್ಕರದಗುಂದಿ ಸೇರಿದಂತೆ ಇತರರು ಇದ್ದರು.
Be the first to comment