ದೀದಿ ರಾಜ್ಯಾದಲ್ಲಿ ಮತ್ತೆ ರಕ್ತದೋಕುಳಿ- ಬಿಜೆಪಿ ನಾಯಕನ ಕಗ್ಗೊಲೆ

ವರದಿ: ಅಮರೇಶ ಕಾಮನಕೇರಿ


   ದೇಶದ ಸುದ್ದಿಗಳು


ಕೋಲ್ಕತಾ: ಮಮತಾ ಬ್ಯಾನರ್ಜಿ ಸಿಎಂ ಆಗಿ ಅಧಿಕಾರ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ದ್ವೇಷದ ರಕ್ತದೋಕುಳಿ ಚೆಲ್ಲಿದೆ. ಹೂಗ್ಲಿ ಜಿಲ್ಲೆಯ ಆರಾಮ್‍ಬಾಗ್ ಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಕೊಲೆಗೈಯಲಾಗಿದ್ದು, ಇದರಲ್ಲಿ ಟಿಎಂಸಿ(ತೃಣಮೂಲ ಕಾಂಗ್ರೆಸ್) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

ಆರಾಮ್‍ಬಾಗ್ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಶೇಖ್ ಅಮಿರ್ ಖಾನ್ ಮೃತ ದುರ್ದೈವಿ. ಖಾನ್ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ಬಿದಿರು ಕೋಲಿನಿಂದ ಥಳಿಸಿ ಮಾರಣಾಂತಿಕ ದಾಳಿ ನಡೆಸಲಾಗಿತ್ತು. ಈ ಹಲ್ಲೆಯಿಂದ ಗಂಭೀರ ಗಾಯಗೊಂಡ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿಯೇ ಖಾನ್ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಈ ಕೊಲೆ ಹಿಂದೆ ಟಿಎಂಸಿ ಪಕ್ಷದ ಕೈವಾಡವಿದೆ. ಖಾನ್ ಅವರ ಮೇಲೆ ದಾಳಿ ನಡೆದ ಸ್ಥಳ ಎಸ್‍ಡಿಪಿಒ ಕಚೇರಿಯಿಂದ ಹೆಚ್ಚು ದೂರವಿಲ್ಲ. ಆದರೂ ಪೊಲೀಸರು ಸ್ಥಳಕ್ಕೆ ತಲುಪಲು ತಡಮಾಡಿದರು ಎಂದು ಸ್ಥಳೀಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೆ ಬಿಜೆಪಿ ಕಾರ್ಯಕರ್ತರು ಹತ್ಯೆಯನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000 ಕ್ಕೂ ಹೆಚ್ಚುನ ದೇಣಿಗೆ ಸಹಾಯ ನೀಡಬಹುದು
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh
A/c 62053220183
IFC sbin 0020354

Be the first to comment

Leave a Reply

Your email address will not be published.


*