ಆರ್ಯವೈಶ್ಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಾಗಿದೆ.

ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ್ದು, ಜಾತಿ ಮತ್ತು ಆದಾಯ ಪ್ರಮಾಣ ನಮೂನೆ-ಜಿಯಲ್ಲಿ ಪಡೆದಿರಬೇಕು. ಕರ್ನಾಟಕ ರಾಜ್ಯದವರಾಗಿದ್ದು, ಆಧಾರ ಕಾರ್ಡ, ವಾರ್ಷಿಕ ಆದಾಯ 3 ಲಕ್ಷ ಮೀರಿದ 18 ರಿಂದ 45 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ರಷ್ಟು ಮೀಸಲಿರಿಸಿದೆ. ಅರ್ಜಿ ನಮೂನೆಗಾಗಿ ನಿಮಗದ ಜಿಲ್ಲಾ ಕಚೇರಿಯಿಂದ ಪಡೆದು ಜನವರಿ 18, 2022 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111, ಕಚೇರಿ ದೂಸಂ.08354-236216ಗೆ ಸಂಪರ್ಕಿಸಬಹುದಾಗಿದೆ.

Be the first to comment

Leave a Reply

Your email address will not be published.


*