ಮಾಚಿದೇವ ಅಭಿವೃದ್ದಿ ನಿಗಮ : ವಿವಿಧ ಸೌಲಭ್ಯಕ್ಕೆ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಅರಿವು ಶೈಕ್ಷಣಿಕ ಸಾಲ, ಸಾಂಪ್ರದಾಯಿಕ ವೃತ್ತಿದಾರರ ಸಾಲ, ಸ್ವಯಂ ಉದ್ಯೋಗಕ್ಕೆ ಸಾಲ, ಸ್ವ-ಸಹಾಯ ಗುಂಪುಗಳಿಗೆ ಆರ್ಥಿಕ ನೆರವು ಸೌಲಭ್ಯಗಳನ್ನು ನೀಡುವ ಸಲುವಾಗಿ ಅರ್ಹ ಮಡಿವಾಳ ಸಮುದಾಯ ವರ್ಗದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಈಗಾಗಲೇ ಈ ಯೋಜನೆಯಡಿ ಶೈಕ್ಷಣಿಕ ಸಾಲ ಪಡೆದವರು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದಿನ ಕಂತುಗಳಿಗೆ ಸುವಿಧಾ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmmd.karnataka.gov.in ನಿಂದ ಪಡೆಯಬಹುದಾಗಿದೆ.

ಸಾಂಪ್ರದಾಯಿಕ ವೃತ್ತಿ, ಸ್ವಯಂ ಉದ್ಯೋಗಕ್ಕೆ ಸಾಲ, ಸ್ವಸಹಾಯ ಗುಂಪುಗಳ ಆರ್ಥಿಕ ನೆರವು ಸೌಲಭ್ಯಕ್ಕಾಗಿ ನೇರವಾಗಿ ಅರ್ಜಿಯನ್ನು ಮಡಿವಾಳ ಮಾಚೀದೇವ ಅಭಿವೃದ್ದಿ ನಿಗಮ, ಜಿಲ್ಲಾಡಳಿತ ಭವನ, ಬಾಗಲಕೋಟೆ ಇವರಿಗೆ ಸಲ್ಲಿಸಬಹುದಾಗಿದೆ. ಒಂದು ಬಾರಿ ನಿಗಮದ ಯಾವುದಾದರೊಂದು ಸೌಲಭ್ಯ ಪಡೆದಿದ್ದಲ್ಲಿ ಅವರ ಕುಟುಂಬದವರು ಮತ್ತೊಂದು ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಭರ್ತಿ ಮಾಡಿದ ಅರ್ಜಿಯನ್ನು ಜನವರಿ 15, 2022 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂಸಂ.08354-236216ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Be the first to comment

Leave a Reply

Your email address will not be published.


*