ದೇವನಹಳ್ಳಿ ಪಿ.ಎಲ್.ಡಿ. ಬ್ಯಾಂಕ್ ವಾರ್ಷಿಕ ಮಹಾಸಭೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ 

ಪಟ್ಟಣದ ನಗರೇಶ್ವರ ಕಲ್ಯಾಣ ಮಂಟಪದ ಮುಂಭಾಗದಲ್ಲಿರುವ ದೇವನಹಳ್ಳಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸಭಾಂಗಣದಲ್ಲಿ 2020-21 ಸಾಲಿನ ವಾರ್ಷಿಕ ಮಹಾಸಭೆ ಕಾರ್ಯಕ್ರಮ ನಡೆಯಿತು.2020-21 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಪ್ರಗತಿಯ ಬಗ್ಗೆ ಬ್ಯಾಂಕಿನ ಅಧ್ಯಕ್ಷ ವಕೀಲ ಮುನಿರಾಜು ಅಧ್ಯಕ್ಷತೆಯಲ್ಲಿಮಾಹಿತಿ ನೀಡಲಾಯಿತು. ಬ್ಯಾಂಕ್ ನಲ್ಲಿ ನಡೆದಿರುವ ವ್ಯವಹಾರ, ಖರ್ಚುಗಳು ಮತ್ತು ಇತರೆ ವಹಿವಾಟುಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಬ್ಯಾಂಕ್ ನಲ್ಲಿ ಠೇವಣಿ ಹೆಚ್ಚಾಗಿ ಬರಲು ವಸೂಲಿ ಶೇ.54.67 ಮಾಡಲಾಗಿದೆ ಎಂದು ಬ್ಯಾಂಕ್ ವ್ಯವಸ್ಥಾಪಕ ಕೆ.ವಿ.ರಾಜೇಂದ್ರ ಪ್ರಸಾದ್ ವಿವರಿಸಿದರು.

CHETAN KENDULI

ಮಾಜಿ ಲೋಕಸಭಾ ಸದಸ್ಯ ಸಿ.ನಾರಾಯಣಸ್ವಾಮಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಮುನೇಗೌಡ ಹಾಗೂ ಬ್ಯಾಂಕ್ ಅಧ್ಯಕ್ಷ ಮುನಿರಾಜು ಮಾತನಾಡಿದರು.ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸಿ.ಶ್ರೀನಿವಾಸ್, ಪುರಸಭಾ ಸದಸ್ಯ ರವೀಂದ್ರ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕ ಎನ್.ಸೊಣ್ಣಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ರಾಜಣ್ಣ, ಬ್ಯಾಂಕಿನ ಕಾರ್ಯಕಾರಿ ಸಮಿತಿ ನಿರ್ದೇಶಕರು, ಸಿಬ್ಬಂದಿ ವರ್ಗ ಇದ್ದರು.

Be the first to comment

Leave a Reply

Your email address will not be published.


*