ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಬೆಂಗಳೂರು

2021ರಂದು ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ( Group Captain Varun Singh ) ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 14 ಮಂದಿಯನ್ನು ಕರೆದೊಯ್ಯುತ್ತಿದ್ದಂತ ಮಿಗ್-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಡಿಸೆಂಬರ್ 8ರಂದು ಪತನಗೊಂಡಿತ್ತು. ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 11 ಮಂದಿ ವಿಧಿವಶರಾಗಿದ್ದರು.

CHETAN KENDULI

ಈ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ( Group Captain Varun Singh No more ) ಅವರನ್ನು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿರೋದಾಗಿ ಐಎಎಫ್ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ತಿಳಿಸಿದೆ.

Be the first to comment

Leave a Reply

Your email address will not be published.


*