ರಾಜ್ಯ ಸುದ್ದಿಗಳು
ದೇವನಹಳ್ಳಿ
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿಶಾಲ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರಕಾರದಿಂದ ಸಿಗುವಂತಹ ಸೌಲಭ್ಯಗಳು ಮತ್ತು ಪ್ರೋತ್ಸಾಹದಾಯಕವಾದ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲೆಯ ೨ ಪ್ರಾಥಮಿಕ ಮತ್ತು ೨ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಭೇಟಿ ನೀಡಿ ಅವರು ಶಿಕ್ಷಕರೊಂದಿಗೆ ಮಾತನಾಡಿದರು.
ಕೆಪಿಎಸ್ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಶೈಕ್ಷಣಿಕ ಗುಣಮಟ್ಟದ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಶಾಲೆಯಲ್ಲಿರುವ ವಿದ್ಯಾರ್ಥಿಗಳ ಮತ್ತು ಕಾಲೇಜು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದರು. ಕ್ಷೀರ ಭಾಗ್ಯ, ಬಿಸಿಯೂಟ ಮಾಡುವವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಶಾಲಾ ವಾತಾವರಣ ಮತ್ತಷ್ಟು ಅಚ್ಚುಕಟ್ಟಾಗಿಟ್ಟಿಕೊಳ್ಳಲು ಸಲಹೆ ಮಾಡಿದರು. ಶಾಲಾ ಕಾಂಪೌಂಡ್ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುವುದರ ಬಗ್ಗೆ ಮಾಹಿತಿ ಪಡೆದರು. ಶಾಲಾ ಕಾಂಪೌಂಡ್ ಬಗ್ಗೆ ನಮಗೂ ಪತ್ರ ಬರೆಯಿರಿ. ಶೈಕ್ಷಣಿಕ ಕಲಿಕೆಯ ಬಗ್ಗೆ ಪರಿಶೀಲಿಸಿ ಮತ್ತಷ್ಟು ಗುಣಮಟ್ಟ ಹೆಚ್ಚಿಸಿಕೊಳ್ಳಿ ಎಂದು ಶಿಕ್ಷಕರಿಗೆ ಸಲಹೆ ಸೂಚನೆ ನೀಡಿದರು.
ಈ ವೇಳೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಗಂಗಮಾರೇಗೌಡ, ಬಿಇಒ ಅಶ್ವತ್ಥ್ ನಾರಾಯಣ್, ವಿಶ್ವನಾಥಪುರ ಕ್ಲಸ್ಟರ್ ಸಿಆರ್‌ಪಿ ಜ್ಯೋತಿಕುಮಾರ್, ಕೆಪಿಎಸ್ ಶಾಲೆಯ ಪ್ರಾಂಶುಪಾಲ ರಂಗಪ್ಪ, ಶಿಕ್ಷಕ ನಾಗೇಶ್, ಪ್ರಾಥಮಿಕ, ಪ್ರೌಢ ಮತ್ತು ಪದವಿ ಶಿಕ್ಷಕ ವೃಂದ ಇದ್ದರು.
Be the first to comment