ರಾಜ್ಯ ಸುದ್ದಿಗಳು
ದೊಡ್ಡಬಳ್ಳಾಪುರ
ಕಳೆದ ಹಲವು ದಿನಗಳಿಂದ ಪಾರ್ಶವಾಯು ಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಆರ್ ಎಲ್ ಜಾಲಪ್ಪ ನವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಕುಟುಂಬ ಮೂಲಗಳಿಂದ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತುಬಗೆರೆ ಮನೆಯಲ್ಲಿ ಪಾರ್ಶವಾಯು ಕಾಯಿಲೆಗೆ ತುತ್ತಾಗಿದ್ದು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದ ಜಾಲಪ್ಪ ನವರು ಇಂದು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ತುಬಗೆರೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದು ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಆರ್ ಎಲ್ ಜಾಲಪ್ಪ ಕಾಲೇಜಿನ ಆವರಣದಲ್ಲಿ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ
Be the first to comment