ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ: ಕುಮಾರಸ್ವಾಮಿ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಮಂಗಳೂರು

ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದು, ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

CHETAN KENDULI

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ?’ ಎಂದು ಅವರು ಪ್ರಶ್ನಿಸಿದ್ದಾರೆ.

Be the first to comment

Leave a Reply

Your email address will not be published.


*