ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ ಘಟನೆ ಖಂಡಿನೀಯ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಮಾಡಿರುವ ಕಿಡಿಗೇಡಿಗಳ ಅಟ್ಟಹಾಸ ಪ್ರತಿ ಕನ್ನಡಿಗರನ್ನು ಕೆರಳಿಸುವಂತೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ತಾಲೂಕು ಅಧ್ಯಕ್ಷ ಆರ್.ಕೆ.ನಂಜೇಗೌಡ(ಆರ್.ಎನ್.ಕೆ) ಆಕ್ರೋಶ ವ್ಯಕ್ತಪಡಿಸಿದರು.ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ ಅವರು ಮಾತನಾಡಿದರು. ಬೆಳಗಾವಿಯು ಕರ್ನಾಟಕ ರಾಜ್ಯದ ಭಾಗವಾಗಿರುವುದರಿಂದ ಅಲ್ಲಿ ಇಂತಹ ಹೇಯ ಕೃತ್ಯ ಎಸಗುತ್ತಿರುವ ಯಾರೇ ಆಗಿರಲೀ ಕೂಡಲೇ ತಕ್ಕ ಶಾಸ್ತಿಯಾಗಬೇಕು. ಇದೊಂದು ದೇಶ ದ್ರೋಹದ ಕೆಲಸವಾಗಿದೆ. ಪ್ರತಿಮೆಯನ್ನು ಹಾಳು ಮಾಡಿರುವುದು ಮತ್ತು ಬೆಳಗಾಗಿಯಲ್ಲಿ ವಾಹನಗಳನ್ನು ಸುಟ್ಟು ಹಾಕಿ, ಹೊಟೇಲ್‌ಗಳಿಗೆ ಕಲ್ಲು ಹೊಡೆದಿರುವ ಘಟನೆ ಇಡೀ ಸಮಾಜ ತಲೆ ತಗ್ಗಿಸುವಂತಹದ್ದು, ಇಂತಹ ವ್ಯವಸ್ಥೆ ರಾಜ್ಯದಲ್ಲಿ ಮರುಕಳಿಸದಂತೆ ಎಚ್ಚರವಹಿಸಬೇಕು. ಬ್ರಿಟೀಷರು ಭಾರತವನ್ನು ಸ್ವಾತಂತ್ರ್ಯಗೊಳಿಸದ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜೊತೆಯಾಗಿ ನಿಂತ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಇವರ ಪ್ರತಿಮೆಯನ್ನು ಮರು ಪ್ರತಿಷ್ಠಾಪಿಸಿ ರಾಜ್ಯದಲ್ಲಿ ಶಾಂತಿ, ಸೌಹರ್ದ್ಯತೆ ಕಾಪಾಡುವ ಕೆಲಸವಾಗಬೇಕಿದೆ ಎಂದು ಒತ್ತಾಯಿಸಿದರು.

CHETAN KENDULI

Be the first to comment

Leave a Reply

Your email address will not be published.


*