ಜಿಲ್ಲಾ ಸುದ್ದಿಗಳು
ಮಂಗಳೂರು:
ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಿರುವ ಘಟನೆ ನಡೆದಿದೆ.
ವಿಘ್ನೇಶ್ (40) ಬಂಧಿತ ಅತಿಥಿ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್ ಲೈನ್ ತರಗತಿಗಳ ಮೂಲಕ ನೋಡಿದ್ದ ವಿಘ್ನೇಶ್, ಕಳೆದ ಒಂದು ವರ್ಷದಿಂದ ಆಕೆಗೆ ಅನಗತ್ಯ ಮೊಬೈಲ್ ಸಂದೇಶ ರವಾನಿಸುತ್ತಿದ್ದ. ಈ ವಿಚಾರವನ್ನು ಬಾಲಕಿ ಪ್ರಾಂಶುಪಾಲರಿಗೆ ತಿಳಿಸುವುದಾಗಿ ಎಚ್ಚರಿಕೆ ನೀಡಿದ ಬಳಿಕ ಸಂದೇಶ ರವಾನೆ ನಿಲ್ಲಿಸಿದ್ದ.
ಬಳಿಕ ಕಾಲೇಜು ಅವರಣದಲ್ಲಿಯೇ ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿ ಹಿಂಬಾಲಿಸುತ್ತಿದ್ದ. ಅಲ್ಲದೆ ಈ ಬಗ್ಗೆ ದೂರು ದಾಖಲಿಸದಂತೆ ಯುವತಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.
ಈ ಸಂಬಂಧ ಸಂತ್ರಸ್ಥ ವಿದ್ಯಾರ್ಥಿನಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಳಿಕ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ಷರತ್ತುಬದ್ದ ಜಾಮೀನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Be the first to comment