ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಕೇರಳ ಸರಕಾರ ವಿಫಲ : ಯಶ್ ಪಾಲ್ ಸುವರ್ಣ ಆಕ್ರೋಶ

ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗದ ಮುಖಂಡರ ಭೇಟಿ


ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಕೇರಳ ರಾಜ್ಯ ಸರಕಾರ ರಾಷ್ಟ್ರೀಯವಾದಿ ಚಿಂತನೆಯ ಬಿಜೆಪಿ ಕಾರ್ಯಕರ್ತರ ರಕ್ಷಣೆಯಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 19 ರಂದು ಮುಂಜಾನೆ ಪಿಎಫ್ಐ ಉಗ್ರರಿಂದ ಬರ್ಬರವಾಗಿ ಹತ್ಯೆಗೀಡಾದ ಕೇರಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಶ್ರೀ ರಂಜಿತ್ ಶ್ರೀನಿವಾಸನ್ ರವರ ಮನೆಗೆ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ ಲಕ್ಷ್ಮಣ್ ರೊಂದಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

 

ಅಲಪ್ಪುಳ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೀನುಗಾರ ಕುಟುಂಬದ ಹಿನ್ನೆಲೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ, ವಕೀಲ ವೃತ್ತಿ ನಡೆಸುತ್ತಿದ್ದ ರಂಜಿತ್ ಶ್ರೀನಿವಾಸ್ ರವರನ್ನು ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಕೊಲೆ ಮಾಡಿರುವ ಪಿಎಫ್ಐ ಉಗ್ರರನ್ನು ರಕ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಾಗಿದೆ. ಕಳೆದ ಎರಡು ತಿಂಗಳಿನಲ್ಲಿ 3 ಮಂದಿ ಬಿಜೆಪಿ ಕಾರ್ಯಕರ್ತರು ಅಮಾನುಷವಾಗಿ ಹತ್ಯೆಗೀಡಾಗಿದ್ದಾರೆ.

ಈ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಘಟನೆಯ ಬಗ್ಗೆ ವರದಿ ಪಡೆಯುವಂತೆ ಆಗ್ರಹಿಸಿದ್ದಾರೆ.

ಪಿಎಫ್ಐ ಮತಾಂಧ ಕೊಲೆಗಡುಕರ ರಕ್ಷಣೆಗೆ ಮುಂದಾಗಿರುವ ಕೇರಳ ರಾಜ್ಯ ಸರಕಾರ, ಬಿಜೆಪಿ ಕಾರ್ಯಕರ್ತರ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ
ನೀಡುವಂತೆ ಒತ್ತಾಯಿಸಿದ್ದಾರೆ.

Be the first to comment

Leave a Reply

Your email address will not be published.


*