ಜಿಲ್ಲಾ ಸುದ್ದಿಗಳು
ಫಲಶ್ರೇಷ್ಠ ರೈತರಿಗೆ ಪ್ರಶಸ್ತಿ ಪ್ರಧಾನ
ಬೀದರ ಜಿಲ್ಲೆಯ ನಾಗಭೂಷಣ ಕಮಠಾಣಾ, ಕಲಬುರಗಿ ಜಿಲ್ಲೆಯ ಸುಜಾತಾ ಶರಣಬಸಪ್ಪ ಪಾಟೀಲ, ಯಾದಗಿರಿಯ ಸತ್ಯನಾರಾಯಣ ಬಂಡಿ, ರಾಯಚೂರಿನ ಬಸವರಾಜ ಶಂಕರಗೌಡ ಮಾಲಿಪಾಟೀಲ, ಬಳ್ಳಾರಿಯ ಶಂತಮ್ಮ ಜಿ.ಎಂ, ವಿಜಯಪುರದ ದೀಪ್ತಿ ಬಾಲಕೋಟೇಶ್ವರ ರಾವ್ ವೆಲ್ಲಂಕಿ, ಕೊಪ್ಪಳದ ಬಸಯ್ಯ ಹಿರೇಂಮಠ, ವಿಜಯಪುರ ಜಿಲ್ಲೆಯ ಲಕ್ಷ್ಮೀ ಬಸಗೊಂಡ ರೈತರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬಾಗಲಕೋಟೆ:ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ವಿಶ್ರ ಬೆಳೆಗಳನ್ನು ಬೆಳೆಯುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ತೋವಿವಿಯ ಉದ್ಯಾನಗಿರಿಯಲ್ಲಿ ಹಮ್ಮಿಕೊಂಡ ಮೂರು ದಿನಗಳ ತೋಟಗಾರಿಕೆ ಮೇಳದಲ್ಲಿ ಫಲಶ್ರೇಷ್ಟ ರೈತರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಮಣ್ಣಿನ ಗುಣ, ಹವಾಮಾನಕ್ಕೆ ತಕ್ಕಂತೆ ವಿವಿಧ ಬೆಳೆಗಳನ್ನು ಬೆಳೆಯುವದರಿಂದ ತಮ್ಮ ಆದಾಯ ಹೆಚ್ಚಿಸುವದರ ಜೊತೆಗೆ ಜಿಡಿಪಿ ಸಹ ಹೆಚ್ಚಳವಾಗುತ್ತದೆ. ರೈತರು ಮಿಶ್ರ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದರು.
ರೈತರು ಕೇವಲ ಜೋಳ, ಸಜ್ಜಿ, ಮೆಕ್ಕೆಜೋಳ ಬೆಳೆಗಳಿಗೆ ಮಾತ್ರ ಸೀಮಿತವಾದರೆ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗುವದಿಲ್ಲ. ತೋಟಕಾರಿಕೆ ಬೆಳೆಗಳನ್ನು ಬೆಳೆದಾಗ ಪ್ರತಿ ಎಕೆರೆಗೆ ನಿರ್ಧಿಷ್ಟವಾದ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ತೋಟಗಾರಿಕೆ ಬೆಳೆಗಳಲ್ಲಿ ಪ್ರತಿ ಎಕರೆಗೆ 1 ಲಕ್ಷದವರೆಗೂ ಲಾಭ ಪಡೆಯಬಹುದಾಗಿದೆ. ಪಾಲಿಹೌಸ್‍ನಲ್ಲಿ ಬೆಳೆದರೆ ಎಕರೆಗೆ 1.5 ಲಕ್ಷ ಲಾಭ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯವು ರೈತರಿಗೆ ವಿವಿಧ ತೋಟಗಾರಿಕೆ ಬೆಳೆ ಹಾಗೂ ಮಾರುಕಟ್ಟೆಯ ಬಗ್ಗೆ ಮಾಹಿತಿ ಒದಗಿಸಿದಲ್ಲಿ ರೈತ ಆರ್ಥಿಕವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಬಾಗಲಕೋಟೆ ಜಿಲ್ಲೆಯಲ್ಲಿ ನೀರಾವರಿ ಕ್ಷೇತ್ರವನ್ನು ಹೆಚ್ಚಿಸಲು ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಬೀಳಗಿ ಮತಕ್ಷೇತ್ರವನ್ನು ಮುಂದಿನ 2 ವರ್ಷದಲ್ಲಿ ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿ ಮಾಡಲಾಗುತ್ತಿದೆ. ರೈತರಿಗೆ ಉತ್ತಮ ಗುಣಮಟ್ಟದ ವಿದ್ಯುತ್, ನೀರು ಪೂರೈಸುವ ಮೂಲಕ ರೈತರ ಆರ್ಥಿಕ ಮಟ್ಟ ಹೆಚ್ಚಿಸುವ ಕಾರ್ಯ ಮಾಡಲಾಗುತ್ತಿದೆ. ಕೆರೆ ತುಂಬಿಸುವುದು, ಬೋರವೆಲ್, ಬಾವಿಗಳು ಪುನಃ ರಿಚಾರ್ಜ ಮಾಡುವತ್ತ ಗಮನಹರಿಸಲಾಗುತ್ತಿದೆ ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ ವಚ್ರ್ಯೂವಲ್ ಮೂಲಕ ಮಾತನಾಡಿ ಜಿಲ್ಲೆಯ ಫಲಶ್ರೇಷ್ಟ ರೈತ ಅಥವಾ ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ಹಾಗೂ ಸನ್ಮಾನ ಮಾಡುವುದದ ಮೂಲಕ ಕೃಷಿಕರಿಗೆ ಸಮಾಜಿಕ ಮಾನ್ಯತೆ ಹಾಗೂ ಪ್ರಗತಿಯ ದಿಕ್ಕಿನತ್ತ ಸಾಗಲು ಉತ್ತೇಜನ ನೀಡುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಹಮ್ಮೆ ಎನಿಸುತ್ತಿರುವುದಾಗಿ ತಿಳಿಸಿದರು.
ಪ್ರಸಕ್ತ ವರ್ಷವನ್ನು ಅಂತರರಾಷ್ಟ್ರೀಯ ಹಣ್ಣು ಮತ್ತು ತರಕಾರಿಗಳ ವರ್ಷವೆಂದು ವಿಶ್ವ ಸಂಸ್ಥೆ ಘೋಷಿಸಿದ್ದು, ಈ ಸಂದರ್ಭದಲ್ಲಿ ತೋಟಗಾರಿಕೆ ಮೇಳವನ್ನು ಆಯೋಜಿಸಿರುವುದು ಬಹಳ ಸಮಂಜಸವಾಗಿದೆ. ರೈತ ಸಮುದಾಯಕ್ಕೆ ಉಪಯುಕ್ತವಾಗುವ ರೀತಿಯಲ್ಲಿ ವಿವಿಧ ವಿಷಯಗಳ ಮೇಲೆ ತಾಂತ್ರಿಕಗೋಷ್ಠಿಯಲ್ಲಿ ರೈತರು, ರೈತ ಮಹಿಳೆಯರು ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು. ವಿಶ್ವವಿದ್ಯಾಲಯಕ್ಕೆ ಶಿಕ್ಷಣ, ಸಂಶೋಧನೆ, ವಿಸ್ತರಣೆ ಹಾಗೂ ಮೂಲಸೌಕರ್ಯಗಳ ಅಭಿವೃದ್ದಿಗೆ ಅವಶ್ಯವಿರುವ ಎಲ್ಲ ರೀತಿಯ ಸಹಾಯ, ಅನುದಾನ ಒದಗಿಸಿಕೊಡುವಂತೆ ಮುಖ್ಯಮಂತ್ರಿಗಳಲ್ಲಿ ಕೋರಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಆರ್.ಬಿ. ತಿಮ್ಮಾಪೂರ, ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಂ.ಇಂದಿರೇಶ, ತೋವಿವಿಯ ವ್ಯವಸ್ಥಾಪನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
Be the first to comment