ಜಿಲ್ಲಾ ಸುದ್ದಿಗಳು
ಹೊನ್ನಾವರ
ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಹೊನ್ನಾವರ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯವರೆಗೆ ಮುಷ್ಕರ ನಡೆಸುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ಕಳೆದ 15 ವರ್ಷಗಳಿಂದ ಸರ್ಕಾರವು ಅತಿಥಿ ಉಪನ್ಯಾಸಕರನ್ನು ಕೇವಲ ಜೀತದಾಳುಗಳಂತೆ ನಡೆಸಿಕೊಂಡು ಬಂದಿರುವುದು ವಿಪರ್ಯಾಸದ ಸಂಗತಿ. ಯಾವುದೇ ಭದ್ರತೆ ನೀಡದೆ ಪ್ರತಿವರ್ಷ 8 ತಿಂಗಳ ಗುತ್ತಿಗೆ ಆಧಾರವಂಬಂತೆ ಆಯ್ಕೆ ಪ್ರಕ್ರಿಯೆ ಮಾಡಿ 6 ತಿಂಗಳಿಗೊಮ್ಮೆ ವೇತನ ನೀಡುತ್ತಾ ಬಂದಿದ್ದಾರೆ. ಕಳೆದ 7 ವರ್ಷಗಳಿಂದ 1 ರೂಪಾಯಿಯ ಬಿಡಿಗಾಸು ವೇತನ ಕೂಡ ಹೆಚ್ಚು ಮಾಡದೇ ನಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಮಾಡುತ್ತಿರುವ ತಾರತಮ್ಯ ನೀತಿಯನ್ನು ಖಂಡಿಸಿ ಅತಿಥಿ ಉಪನ್ಯಾಸಕರು ಅನಿರ್ಧಿಷ್ಟಾವಧಿಯವರೆಗೆ ಮುಷ್ಕರಕ್ಕೆ ಬೆಂಬಲ ಸೂಚಿಸಿ ತರಗತಿಗಳನ್ನು ಬಹಿಷ್ಕರಿಸುತ್ತಿದ್ದೇವೆ.
ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘಟನೆಗಳು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರ ಹೂಡಲಾಗಿದೆ. ಇದಕ್ಕೆ ಕಾರಣ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಹೊನ್ನಾವರ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಈ ವೇಳೆ ಉಪಸ್ತಿತರಿದ್ದರು.
Be the first to comment