ರಾಜ್ಯ ಸುದ್ದಿಗಳು
ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಾಜೀವ್ ಗಾಂಧಿ ಬಡಾವಣೆ ಒಂದನೇ ಹಂತದಲ್ಲಿ ಸದಸ್ಯರಾಗಿರುವ ಹಂಸಪ್ರಿಯ ಮತ್ತು ರಮೇಶ್ ರವರಿಂದ ಸ್ಥಳೀಯರಿಗೆ ಕಸ ವಿಲೇವಾರಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ನಿವಾಸಿಗಳಿಗೆ ಒಣ ಕಸ ಮತ್ತು ಹಸಿ ಕಸ ನಿರ್ವಹಣೆ ಕುರಿತು ಅರಿವು ಮೂಡಿಸಲಾಯಿತು. ಹಸಿಕಸ ಮತ್ತು ಒಣಕಸ ಸಂಗ್ರಹಣೆಗಾಗಿ ವಿಶೇಷ ಬಿನ್ ಗಳನ್ನು ವಿತರಿಸಲಾಯಿತು. ವಿತರಣಾ ಕಾರ್ಯಕ್ರಮದಲ್ಲಿ ಬಿ ಜೆ ಪಿ ನಾಯಕರಾದ ರಮೇಶ್ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Be the first to comment