ವಾಲ್ಮೀಕಿ ಮೂರ್ತಿ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ರಾಮುಲು : ಟೋಕರೆ ಕೋಳಿ,ಗೊಂಡ ಕುರುಬ ಸಮಾಜಕ್ಕೆ ಅನ್ಯಾಯ ಮಾಡಬೇಡಿ ಎಂದು ಮನವಿ ಸಲ್ಲಿಸಿದ ಮುಖಂಡರು

 

‌ಬೀದರ್ 27  :  ಬೀದರ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಶಮತಾಬಾದ (ಹೋಸ್ಸಳ್ಳಿ) ಗ್ರಾಮದಲ್ಲಿ ನಡೆಯುತ್ತಿರುವ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಪ್ರಯುಕ್ತ ಕಲ್ಬುರ್ಗಿ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಪರಿಶಿಷ್ಟ ಪಂಗಡ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀರಾಮಲು ರವರನ್ನು ಭೇಟಿಯಾಗಿ ಎಸ್ ಟಿ ಟೋಕರೆ ಕೋಳಿ ಮತ್ತು ಎಸ್ ಟಿ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣ ಪತ್ರವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗ್ರತಿ ಕೋಶ) ರವರ ವರದಿ ಕಡ್ಡಾಯವ ಗೋಳಿಸಿರುವ ತಮ್ಮ ಪರಿಶಿಷ್ಟ ಪಂಗಡ ಇಲಾಖೆಯ ಹೋರಡಿಸಿದ ಅದೇಶ ಹಿಂಪಡೆಯುವಂತೆ ಲಿಖಿತ ಪತ್ರ ಬರೆದು ಮನವಿ ಮಾಡಲಾಯಿತು.

ಒಂದು ವೇಳೆ ತಾವು ಈ ಅದೇಶ ಹಿಂಪಡೆಯದೆ ಇದ್ದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಉಗ್ರವಾದ ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುವುದಾಗಿ ಕೂಡಾ ಮನವಿ ಪತ್ರದಲ್ಲಿ ತಿಳಿಸಲಾಯಿತು ಎಂದರು. ಈ ಸಂಧರ್ಭದಲ್ಲಿ ಬೀದರ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಸಹ ಕಾರ್ಯದರ್ಶಿ ಯಾದ ಮಾರುತಿ ಮಾಸ್ಟರ್ , ಮಹರ್ಷಿ ವಾಲ್ಮೀಕಿ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಪ್ಪಾ ಅಣ್ಣಾಜಿ ಖಾಸೆಂಪೂರ, ಜಿಲ್ಲಾ ವಾಲ್ಮೀಕಿ ಸಮಾಜ ಸಂಘದ ಉಪಾಧ್ಯಕ್ಷರಾದ ರವೀಂದ್ರ ಗುಮಾಸ್ತಿ ಖಾಸೆಂಪೂರ, ಜಿಲ್ಲಾ ವಾಲ್ಮೀಕಿ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿಯಾದ ಸಂಜುಕುಮಾರ ಗುಮಾಸ್ತಿ ಖಾಸೆಂಪೂರ, ಜಿಲ್ಲಾ ಮಹರ್ಷಿ ವಾಲ್ಮೀಕಿ ಸಮಾಜ ಸಂಘದ ಸಂಘಟನ ಕಾರ್ಯದರ್ಶಿಯಾದ ಬಲವಂತ ಮಂದಕನ್ನಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Be the first to comment

Leave a Reply

Your email address will not be published.


*