ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಮನವಿ… 

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ರಾಜ್ಯ ಸುದ್ದಿಗಳು 

ಕಾರವಾರ

ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸಿ ರಾಜ್ಯದಲ್ಲಿ ನೀಡಲಾಗಿರುವ ಬಂದ್ ಕರೆ ಸಂಪೂರ್ಣ ಬೆಂಬಲ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕುಮಟಾ ತಾಲೂಕಾಧ್ಯಕ್ಷ ನಾಗರಾಜ್ ಶೇಟ್ ಅವರು ಹೇಳಿದ್ದಾರೆ. ಕಾರವಾರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಹಾಗೂ ವಾಟಾಳ್ ನಾಗರಾಜ್ ಅವರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿಡಿ.31 ರಂದು ಬಂದ್ ಕರೆ ನೀಡಲಾಗಿದೆ. 

CHETAN KENDULI

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲ ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ವಾಹನದ ಮೇಲೆ ದಾಳಿ ಮಾಡಿ ಹಲ್ಲೆ ಮಾಡಲಾಗುತ್ತಿದೆ. ಇದು ಸರಿಯಲ್ಲಿ ಪಾಕಿಸ್ತಾನದ ಗಡಿಯಲ್ಲಿ ನಡೆಯುತ್ತಿರುವ ಹಾಗೆ ಮಹಾರಾಷ್ಟ್ರದವರು ಕನ್ನಡಿಗರ ಜೊತೆ ನಡೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಯಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಶೇಟ್ ಆಗ್ರಹಿಸಿದರು.

Be the first to comment

Leave a Reply

Your email address will not be published.


*