ಕೊರಗ ಕುಟುಂಬದ ಮೇಲೆ ಲಾಠಿಚಾರ್ಜ್ ಮಾಡಿದ ಪೊಲೀಸರ ಮೇಲೆ ಕ್ರಮಕ್ಕೆ ಸೂಚಿಸಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ..!!

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಉಡುಪಿ

ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ಸೋಮವಾರ ನಡೆದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸಿದ್ದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸದ್ರಿ ಕುಟುಂಬಗಳು ನನಗೆ ಪರಿಚಯವಿದ್ದು, ಅಲ್ಲಿರುವ 9ಕ್ಕೂ ಹೆಚ್ಚು ಕುಟುಂಬದವರು ಅಮಾಯಕರಾಗಿದ್ದು, ಅವರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು ಇಂತಹ ಚಟುವಟಿಕೆಗಳನ್ನು ಸರಕಾರ ಸಹಿಸುವುದಿಲ್ಲ. ಈಗಾಗಲೇ ಮಾನ್ಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಪೋಲಿಸರ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಹೇಳಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

CHETAN KENDULI

ಹುಬ್ಬಳ್ಳಿಯಲ್ಲಿ ಪಾರ್ಟಿಯ ರಾಜ್ಯ ಕಾರ್ಯಕಾರಣಿಯಲ್ಲಿ ತಾನು ಭಾಗವಹಿಸಿದ್ದು, ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ. ಸಂತ್ರಸ್ತ ಕೊರಗ ಜನಾಂಗಕ್ಕೆ ನ್ಯಾಯ ಒದಗಿಸುವಲ್ಲಿ ಮತ್ತು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾವುದೇ ಆತಂಕ ಬೇಡ. ಬುಧವಾರ ಕೊರಗರ ಜನಾಂಗದ ಕೇರಿಗೆ ತಾನು ಭೇಟಿ ನೀಡಲಿದ್ದು, ನೊಂದ ಕುಟುಂಬದ ಜೊತೆ ಚರ್ಚಿಸುವುದಾಗಿ ಸಚಿವ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*