ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕಿ ರೂಪಾಲಿ ನಾಯ್ಕ… 

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಕಾರವಾರ

ಕೋವಿಡ್ ನಿಂದ ಮೃತಪಟ್ಟ ತಾಲೂಕಿನ ಅರ್ಹ 44 ಫಲಾನುಭವಿಗಳಿಗೆ ತಲಾ 1 ಲಕ್ಷ ರೂ. ಮೌಲ್ಯದ ಚೆಕ್ ಅನ್ನು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ವಿತರಿಸಿದರು. ಕಾರವಾರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಚೆಕ್ ವಿತರಿಸಿ, ಈ ಕಾಯಿಲೆಯಿಂದ ಮೃತಪಟ್ಟಿರುವುದು ವಿಷಾದನೀಯ ಎಂದು ತಿಳಿಸಿದರು.

CHETAN KENDULI

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೊರೋನಾ ಮಹಾಮಾರಿಯಿಂದಾಗಿ ಮೃತಪಟ್ಟವರ ಕುಟುಂಬದ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರದಿಂದ ನೇರವಾಗಿ 50 ಸಾವಿರ ರೂಪಾಯಿ ಜಮಾ ಆಗಲಿದೆ ಎಂದರು.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ನೀಡುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತಂದಿರುವ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ರೂಪಾಲಿ ನಾಯ್ಕ ತಿಳಿಸಿದರು.ನಗರಸಭೆ ಅಧ್ಯಕ್ಷರಾದ ಡಾ.ನಿತಿನ್ ಪಿಕಳೆ, ಕೋವಿಡ್ ಕಾಯಿಲೆಯ ಕುರಿತು ವಿವರಿಸಿದರು. ತಹಶೀಲ್ದಾರ ಶ್ರೀ ಎನ್.ಎಪ್.ನೊರೋನ್ನಾ, ಕಾರವಾರ ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*