ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಭಟ್ಕಳದವರಿಂದ ಪತ್ರಿಕಾಗೋಷ್ಠಿ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಭಟ್ಕಳ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ನೈಜ ಪರಿಶಿಷ್ಟರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವವರ ವಿರುದ್ಧ ಪ್ರತಿಭಟನೆ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟದಲ್ಲಿ ಕೊರಗರ ಮೇಲೆ ಪೋಲಿಸ್ ಇಲಾಖೆ ನಡೆಸಿದ ಅಮಾನವೀಯ ದಾಳಿಯನ್ನು ಖಂಡಿಸಿ ಭಟ್ಕಳದ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿಯನ್ನು ನಡೇಸಿದರು.

CHETAN KENDULI

ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ವಿತರಣೆ ಅವ್ಯಾಹತವಾಗಿ ನಡೆದಿದ್ದು, ಅದರ ದುರುಪಯೋಗ ಪಡೆಯುತ್ತಿರುವ ಇಲ್ಲಿನ ನಕಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನೈಜ ಪರಿಶಿಷ್ಟರಿಗೆ ಸಿಗಬೇಕಾದ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮೀಸಲಾತಿಯ ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ಅದನ್ನು ಖಂಡಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ರೀತಿಯಲ್ಲಿ ಪ್ರತಿಭಟನೆ ಮಾಡುವವರಿದ್ದು ಭಟ್ಕಳ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟದಲ್ಲಿ ಪೋಲಿಸ್ ಅಧಿಕಾರಿಗಳು ಕೊರಗರ ಮೇಲೆ ನಡೆಸಿದ ಅಮಾನವೀಯ ದೌರ್ಜನ್ಯವನ್ನು ಕಟುವಾಗಿ ಖಂಡಿಸುವುದಾಗಿ ತಿಳಿಸಿರುವುದಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ಉಪ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಮೋಗೆರ್ ಸಂಘ ರಾಜ್ಯ ಸಂಚಾಲಕರಾದ ನಂದರಾಜ್, ದಲಿತ ಮುಖಂಡರಾದ ಜಯಪ್ರಕಾಶ್ , ಸೀತಾರಾಮ್, ಅಪು, ಗುರುಚರಣ, ತುಳಿಸಿದಾಸ, ನಾರಾಯಣ್ ಶಿರೂರು, ವಕೀಲರಾದ ರವೀಂದ್ರ, ಕಿರಣ್ ಶಿರೂರು, ಮಾರುತಿ ಪಾವಸ್ಕರ್, ವೆಂಕಟೇಶ್ ಹಳ್ಳೆರ್, ಜಗನ್ನಾಥ್ ರೇವಣಕರ್ , ಹಂಸಿ, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*