ಜಿಲ್ಲಾ ಸುದ್ದಿಗಳು
ಹೊನ್ನಾವರ
ತಾಲೂಕಿನ ಚಿಕ್ಕನಕೋಡ್ ಗ್ರಾಮ ಪಂಚಾಯತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಗುಂಡಿಬೈಲ್ ನವಗ್ರಾಮ ಕಾಲೋನಿಯ ಪಕ್ಕದ ಜಾಗವನ್ನು ಆಯ್ಕೆ ಮಾಡಿಕೊಂಡಿರುವುದು ಸ್ಥಳೀಯರ ವಿರೋಧಕ್ಕೆ ಕಾರಣವಾಗಿದ್ದು ,ಇದನ್ನು ವಿರೋಧಿಸಿ 44 ನಾಗರೀಕರು ಸಹಿ ಹಾಕಿದ್ದ ಪತ್ರವನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸಿದ್ದಾರೆ.ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ “ಜನವಸತಿ ಪ್ರದೇಶದ ಸುತ್ತಲಿನ 40 ಮನೆಗಳಿಗೆ ಇದರಿಂದ ತೊಂದರೆ ಉಂಟಾಗುವ ಸಾಧ್ಯತೆ ಇದ್ದು, ರೋಗ ಹರಡುವ ಸಾಧ್ಯತೆ ಬಹಳಷ್ಟಿದೆ ಎಂದು ಸ್ಥಳೀಯರು ಪತ್ರದಲ್ಲಿ ತಿಳಿಸಿದ್ದಾರೆ.
ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಗುರುತಿಸಿರುವ ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ನಾಯ್ಕ, ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ಕೃಷ್ಣಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಘ್ನೇಶ್ ಹೆಗಡೆ, ಸದಸ್ಯರು ಹಾಗೂ ಪಿ.ಡಿ.ಒ ಗೀತಾ ಹೆಗಡೆ ಬುಧವಾರ ಜನರೊಂದಿಗೆ ಸಮಸ್ಯೆ ಕುರಿತು ಚರ್ಚಿಸಿದ್ದಾರೆ.
Be the first to comment