ಅಂತರ ಮಹಾವಿದ್ಯಾಲಯಗಳ ಮಹಿಳಾ ಹ್ಯಾಂಡ್‍ಬಾಲ್ ಪಂದ್ಯಾವಳಿ:ಕ್ರೀಡಾಪಟುಗಳಿಗೆ ಸ್ಪರ್ಧಾ ಮನೋಭಾವ ಮುಖ್ಯ : ತೋಳಮಟ್ಟಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಕ್ರೀಡಾಪಟುಗಳಿಗೆ ಸ್ಪರ್ಧಾ ಮನೋಭಾವನೆ ಮುಖ್ಯವಾಗಿದೆ ಎಂದು ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರ ಶಂಕರ ತೋಳಮಟ್ಟಿ ಹೇಳಿದರು.


ನಗರದ ಬ.ವಿ.ವ ಸಂಘದ ಮೈದಾನದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಯೋಗದಲ್ಲಿ ಡಿಸೆಂಬರ 29 ರಂದು ಹಮ್ಮಿಕೊಂಡ ಪ್ರಸಕ್ತ ಸಾಲಿನ ಅಂತರ್ ಮಹಾವಿದ್ಯಾಲಯಗಳ ಮಹಿಳೆಯರ ಹ್ಯಾಂಡಬಾಲ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾಳುಗಳಿಗೆ ಗೆಲವು ಮುಖ್ಯವಲ್ಲ, ಪಂದ್ಯಾವಳಿಯಲ್ಲಿ ಭಾಗವಹಿಸುವುದರ ಜೊತೆಗೆ ಸ್ಪರ್ಧಾ ಮನೋಭಾವ ಹೊಂದಬೇಕು. ಸೋಲೆ ಗೆಲುವಿನ ಮೆಟ್ಟಿಲು ಎಂದು ಕ್ರೀಡಾ ಕ್ಷೇತ್ರದ ಬಗ್ಗೆ ವಿಚಾರಗಳನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಡಾ.ಜಗನ್ನಾಥ ಚವ್ಹಾಣ, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಎನ್.ಪಟ್ಟಣಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸುನೀಲ ನಡಕಟ್ಟಿ, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ & ವಿದ್ಯಾರ್ಥಿನಿಯರು ಉಪಸ್ಥಿತರಿದರು. ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ತಂಡ ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಮುಧೋಳನ ದಾನಮ್ಮ ದೇವಿ ಮಹಿಳಾ ಕಾಲೇಜಿನ ತಂಡ ಪಡೆದುಕೊಂಡಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಮ್.ಬಿ.ಬಳ್ಳಾರಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಸಹ ಅಷ್ಟೇ ಮುಖ್ಯ ಎಂದು ಹೇಳಿದರು.

ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್.ಎ.ಭೂಸನೂರಮಠ, ಬಸವೇಶ್ವರ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್. ಎಸ್.ಬಿರಾದಾರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಎನ್. ಪಟ್ಟಣಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾದ ಶ್ರೀ.ಸುನೀಲ ನಡಕಟ್ಟಿ, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ & ವಿದ್ಯಾರ್ಥಿನಿಯರು ಉಪಸ್ಥಿತರಿದರು.

Be the first to comment

Leave a Reply

Your email address will not be published.


*