ರಾಜ್ಯ ಸುದ್ದಿಗಳು
ಬೆಂಗಳೂರು
ಜನವರಿ 3ರಿಂದ ಮತ್ತೊಂದು ಹಂತದ ಲಸಿಕೆ ಅಭಿಯಾನ ಶುರುವಾಗಲಿದ್ದು, 15-18ನೇ ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ಈ ಹಿನ್ನೆಲೆ ಇಂದಿನಿಂದ ಕೊರೋನಾ ಲಸಿಕೆಗೆ ಆನ್ಲೈನ್ ಮೂಲಕ ನೋಂದಣಿ ಶುರುವಾಗಲಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ 2021ರ ಡಿಸೆಂಬರ್ 25ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದಾಗ ಘೋಷಣೆ ಮಾಡಿದ್ದು, 2022ರ ಜನವರಿ 3ರಿಂದ 15-18 ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಹೇಳಿದ್ದರು. ಅದರಂತೆ ಇಂದಿನಿಂದ ಕೊರೋನಾ ಲಸಿಕೆಗೆ ಇಂದಿನಿಂದ ರಿಜಿಸ್ಟರ್ ಪ್ರಾರಂಭವಾಗಿದೆ. 15-18ನೇ ವರ್ಷದವರಿಗೆ ಲಸಿಕೆ ನೀಡಲು ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ವ್ಯಾಕ್ಸಿನ್ಗೆ ಅನುಮೋದನೆ ಸಿಕ್ಕಿದ್ದು, ಮಕ್ಕಳಿಗೆ ಲಸಿಕೆ ನೀಡಲು ಪ್ರತ್ಯೇಕ ಕೇಂದ್ರಗಳನ್ನು ಸ್ಥಾಪಿಸಿ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚನೆ ನೀಡಿದೆ.
Be the first to comment