ಜಿಲ್ಲಾ ಸುದ್ದಿಗಳು
ಕಾರವಾರ
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಗೆ ನೀಡುವ ತನಕ ತರಗತಿಗಳನ್ನು ಆರಂಭಿಸುವುದಿಲ್ಲ.ಈ ಬಗ್ಗೆ ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹನಮಂತಗೌಡ ಕಲ್ಮನಿ ಎಚ್ಚರಿಕೆ ನೀಡಿದ್ದಾರೆ.ಕಾರವಾರದ ಪತ್ರಿಕಾಭನದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 21 ದಿನಗಳಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕಾರ ಮಾಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವುದು ಬೇಡ ಎಂದು ಕಲ್ಮನಿ ಹೇಳಿದ್ದಾರೆ.ವೇಳೆ ಅತಿಥಿ ಉಪನ್ಯಾಸಕರನ್ನು ವಜಾ ಮಾಡಿದರೆ, ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
ರಾಜ್ಯದ 430 ಸರ್ಕಾರಿ ಕಾಲೇಜುಗಳಲ್ಲಿ ಸುಮಾರು 14,000ಕ್ಕಿಂತ ಅಧಿಕ ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಅತ್ಯಂತ ಕಡಿಮೆ ಗೌರವಧನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋಮಿತಿ ಮೀರುತ್ತಿದ್ದಾರೆ. ಸೇವಾ ಭದ್ರತೆ ಇಲ್ಲದೆ ಅತಿಥಿ ಉಪನ್ಯಾಸಕರ ಬದುಕು ಅಭದ್ರತೆಗೊಳಗಾಗಿದೆ ಎಂದರು.
16,000 ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ದೆಹಲಿ ಸರ್ಕಾರ ವಿಶೇಷ ನಿಯಮಾವಳಿ ರೂಪಿಸಿ ಖಾಯಂಮಾತಿ ಮಾಡಿಕೊಂಡಿದೆ. ಹಾಗೆಯೇ ಹರಿಯಾಣ ಸರ್ಕಾರವು ಕೂಡ ಅತಿಥಿ ಉಪನ್ಯಾಸಕರನ್ನು ಬಾಯಿಂ ಮಾಡಿದ ನಿರ್ದೇಶನ ಇವೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ನಿಯಮಾವಳಿ ರೂಪಿಸಿ, ಸಚಿವ ಸಂಪುಟ ಸಭೆಯಲ್ಲಿ ದೃಢ ನಿರ್ಧಾರ ಕೈಗೊಳ್ಳುವುದರ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆಗಳನ್ನು ಸೃಜಿಸಿ, ಸರ್ಪಡೆ ಮತ್ತು ಕಾನೂನು ತಿದ್ದುಪಡಿ ಮಾಡಿಕೊಂಡು ಅನುಮೋದನೆ ನೀಡಿ, ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೃಜಿಸಿದ ಹುದ್ದೆಗಳಲ್ಲಿ ವಿಲೀನಗೊಳಿಸಬೇಕು. ಎಲ್ಲಾ ಅತಿಥಿ ಉಪನ್ಯಾಸಕರಿಗೂ ಅವರವರ ವಿದ್ಯಾರ್ಹತೆಗೆ ಅನುಸಾರ ಹುದ್ದೆಗಳನ್ನು ನೀಡಿ, ಸೇವಾಭದ್ರತೆ ನೀಡುವುದರ ಮೂಲಕ ಇಚ್ಛಾಶಕ್ತಿಯನ್ನು ಸರ್ಕಾರ ಪ್ರದರ್ಶಿಸಬೇಕು ಎಂದು ಒತ್ತಾಯ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಚಂದ್ರಶೇಖರ ಕಾಳ್ಮನವರ್,ಕಾಂತರಾಜ್,ರಾಘವೇಂದ್ರ. ಅಶ್ವಿನಿ ಎಂ. ರೇಖಾನಾಯ್ಕ,ಕೃಷ್ಣ ಗೌಡ, ಪ್ರದೀಪ ನಾಯಕ, ಸಂಗೀತಾ ನಾಯಕ, ಭಾವನಾ ಬಾಂದೇಕರ ಇದ್ದರು.
Be the first to comment