ಸಾರಿಗೆ ಇಲಾಖೆಯಲ್ಲಿ ಬದಲಾವಣೆಯ ಪರ್ವ:ಉಚಿತ ಚಾಲನಾ ಲೈಸನ್ಸ್‍ಗೆ ಚಿಂತನೆ : ಬಿ.ಶ್ರೀರಾಮುಲು

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.


ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಬಾಗಲಕೋಟೆ ಭಾಗದಲ್ಲಿ ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಲೈಸನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿರುವದನ್ನು ಗಮನಿಸಿದ್ದು, ಅಂತವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ರಾಜ್ಯದ 5 ಜಿಲ್ಲೆಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದನ್ನು ಮಾಡಲಾಗುತ್ತಿದೆ. ಲೈನಸ್ಸ್ ಪಡೆಯಬೇಕಾದರೆ ಪರೀಕ್ಷೆಯಲ್ಲಿ ಶೇ.69 ರಷ್ಟು ಫಲಿತಾಂಶ ಬರಲೇಬೇಕು. ಇದರಿಂದ ಉತ್ತಮ ಚಾಲಕರಿಗೆ ಹೊರಹೊಮ್ಮುತ್ತಿರುವದರಿಂದ ಅಪಘಾತದ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಈ ಮೊದಲು ಮ್ಯಾನುವಲ್ ಆಗಿ ಚಾಲನಾ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಈ ನೂತನ ತಂತ್ರಜ್ಞಾನ ಅಳವಡಿಸುವ ಮೂಲಕ ಚಾಲನಾ ಪರವಾನಿಗೆ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅಥಣಿಯಲ್ಲಿ 7.5 ಕೋಟಿ, ಚಿಕ್ಕೋಡಿಯಲ್ಲಿ 9 ಕೋಟಿ, ಜಮಖಂಡಿಯಲ್ಲಿ 7 ಕೋಟಿ ಹಾಗೂ ಬಾಗಲಕೋಟೆಯಲ್ಲಿ 9 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸಲಾಗುತ್ತಿದೆ. ಹಾವೇರಿಯಲ್ಲಿ ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆ ರ ರಾಜ್ಯದ 30 ಜಿಲ್ಲೆಗಳಲ್ಲಿ ಆಗಬೇಕಿದೆ. ಇದರ ಜೊತೆಗೆ ಸಾರ್ವಜನಿಕರು ಪ್ರಾದೇಶಿಕ ಕಚೇರಿಗೆ ಅಲೆದಾಡದೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದರು ತಿಳಿಸಿದರು.

ಕೇಂದ್ರದ ಸಾರಿಗೆ ಮಂತ್ರಿಗಳಾದ ನಿತೀನ್ ಗಡಕರಿಯವರು ರಸ್ತೆಗಳನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ಈ ಮೊದಲು ಒಂದು ದಿನಕ್ಕೆ 15 ಕಿಮೀ ರಸ್ತೆ ಮಾಡಲಾಗುತ್ತಿತ್ತು, ಈಗ 38-45 ಕಿಮೀ ವರೆಗೆ ಮಾಡಲಾಗುತ್ತಿದೆ. ರಸ್ತೆಗಳು ಉತ್ತಮವಾಗಿದ್ದರೆ ಮಾತ್ರ ಸುಗಮ ಕಾರ್ಯಕೈಗೊಳ್ಳಲು ಸಾದ್ಯವಾಗುತ್ತದೆ. ಸಾರಿಗೆ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಮಕ್ಕಳಿಗೆ ಉಚಿತ ಬಸ್‍ಪಾಸ್, ಗಾರ್ಮೆಂಟ್ ಕಾರ್ಮಿಕರಿಗೆ, ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.

ಶಾಸಕರ ವೀರಣ್ಣ ಚರಂತಿಮಠ ಮಾತನಾಡಿ ಚಾಲನಾ ಪರೀಕ್ಷಾ ಪಥ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು 12 ಎಕರೆ ಜಮೀನು ಮಂಜೂರು ಮಾಡಿದ್ದಾರೆ. ಅದರಲ್ಲಿ 6 ಎಕರೆ ಜಾಗದಲ್ಲಿ 9 ಕೋಟಿ ವೆಚ್ಚದಲ್ಲಿ ಪರೀಕ್ಷಾ ಪಥ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ವಾ.ಕ.ರ.ಸಾ.ಸಂಸ್ಥೆಯ ಡಿಪೋ ಪಾರಂಭಿಸಲು ಅನುಮೋದನೆ ನೀಡಿದ್ದಾರೆ. ಅದಕ್ಕಾಗಿ 7 ಕೋಟಿ ರೂ. ಮಂಜೂರು ಮಾಡಿದ್ದು, ಶಿಕ್ರದಲ್ಲಿಯೇ ಚಾಲನೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಬಾಗಲಕೋಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಶಿಗಿಕೇರಿ ಗ್ರಾ.ಪಂ ಅಧ್ಯಕ್ಷೆ ಮಲ್ಲವ್ವ ದ್ಯಾವನ್ನವರ, ನೀರಲಕೇರಿ ಗ್ರಾ.ಪಂ ಅಧ್ಯಕ್ಷ ಬಸವರಾಜ ಮಲ್ಲಾಪೂರ, ಬುಡಾದ ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಂಟಿ ಸಾರಿಗೆ ಆಯುಕ್ತೆ ಎಂ.ಶೋಭಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ,ವಾ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*