ಕಾರಂತರ ನೆನಪುಗಳ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ

ವರದಿ : ಇಬ್ರಾಹಿಂ ಕೋಟ ಕುಂದಾಪುರ

ಜಿಲ್ಲಾ ಸುದ್ದಿಗಳು 

ಕೋಟ

ಕಾರಂತ ಬದುಕೇ ಒಂದು ಪಾಠ ಶಾಲೆ, ಜೀವನೋದ್ದಕ್ಕು ಬದುಕಿ ತೋರಿಸಿದವರು, ಅವರ ಪರಿಸರದ ಮೇಲೆ ಕಾಳಜಿ ಅಪಾರವಾದದ್ದು, ಒಬ್ಬ ವ್ಯಕ್ತಿ ತನ್ನ ಬದುಕಿನಲ್ಲಿ ಏನಲ್ಲ ಸಾಧಿಸಬಹುದೆಂದು ಕಾರಂತರೇ ಉದಾಹರಣೆ. ಕಾರಂತರ ನೆನಪಿನಲ್ಲಿ ಸಾಹಿತಿಕ ಸಾಂಸ್ಕೃತಿಕ ಚಟುವಟಿಕೆ ಮೂಲಕ ಥೀಮ್ ಪಾರ್ಕ್ ಉತ್ತಮ ಕಾರ್ಯ ನಿರ್ವಹಿಸಿದೆ. ಕಾರಂತರ ನೆನಪುಗಳ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಎಂದು ವಿಧಾನಸಭಾಧ್ಯಕ್ಷ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು.

CHETAN KENDULI

 ಅವರು ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರ ಥೀಮ್ ಪಾರ್ಕಿಗೆ ಭೇಟಿ ನೀಡಿ ಕೆರೆಯ ಮಧ್ಯದಲ್ಲಿರುವ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಅಂಗನವಾಡಿ ವೀಕ್ಷಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಥೀಮ್ ಪಾರ್ಕ್ ವತಿಯಿಂದ ಅವರನ್ನು ಗೌರವಿಸಲಾಯಿತು.

 ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಸಹಾಯಕ ಆಯುಕ್ತ ರಾಜು ಕೆ, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯ ಅಧಿಕಾರಿ ಶ್ರೀಮತಿ ಪೂರ್ಣಿಮಾ, ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪ್ರತಿಷ್ಠಾನ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*