ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯ :ಬಗೆಹರಿಯದಿದ್ದಲ್ಲಿ ಉಗ್ರ ಪ್ರತಿಭಟನೆ ಕ್ಯಾಂಪಸ್ ಫ್ರಂಟ್

ವರದಿ : ಇಬ್ರಾಹಿಂ ಕೋಟ ಕುಂದಾಪುರ

ಜಿಲ್ಲಾ ಸುದ್ದಿಗಳು 

 ಉಡುಪಿ

ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಈ ಮೊದಲು ಹಿಜಾಬ್ ಖಂಡನೆ ಇತ್ತಾದರೂ ಇದೀಗ ತೀವ್ರವಾಗಿದೆ. ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಇದು ಧಾರ್ಮಿಕ ತಾರತಮ್ಯವಾಗಿದ್ದು ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ.ಭಾರತೀಯ ಸಂವಿಧಾನದ 25ನೇ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೂಲಭೂತ ಹಕ್ಕುಗಳಾಗಿ ಸೇರಿಸಿದೆ. ಇದರ ಪ್ರಕಾರ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ, ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಇದಲ್ಲದೆ ಎಲ್ಲಾ ಪಂಗಡಗಳು ತಮ್ಮದೇ ಆದ ಧಾರ್ಮಿಕ ನಿರ್ವಹಣೆಯನ್ನು ಮಾಡಬಹುದಾಗಿದೆ ಎಂದು ಸಂವಿಧಾನದ 26ನೇ ವಿಧಿಯು ಹೇಳುತ್ತದೆ. ಒಂದು ಮುಸ್ಲಿಂ ಮಹಿಳೆಗೆ ಹಿಜಾಬ್ ಧರಿಸುವುದು ಅವರ ಧಾರ್ಮಿಕ ನಂಬಿಕೆಗಳಲ್ಲಿ ಒಂದಾಗಿದೆ ಆದರೆ ಈ ಹಕ್ಕನ್ನು ಅವರಿಂದ ಕಸಿದುಕೊಳ್ಳಲಾಗುತ್ತಿದೆ.

CHETAN KENDULI

ಬಹುಮುಖ್ಯವಾಗಿ ವಿದ್ಯಾರ್ಥಿನಿಯರು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದರು ಆದರೆ ಇದೀಗ ಶಿಕ್ಷಕ ವೃಂದದ ಕೆಲವೊಬ್ಬರು ಹಿಜಾಬ್ ಧರಿಸಲು ತಡೆಯುತ್ತಿದ್ದಾರೆ ಹಾಗೂ ತರಗತಿಗೆ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ. ಆ ವಿದ್ಯಾರ್ಥಿನಿಯರ ಪೋಷಕರು ಈ ಹಿಂದೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು. ಅಲ್ಲದೆ ಸತತವಾಗಿ ಇದರ ಕುರಿತು ಮಾತನಾಡಲು ಹೋದಾಗ ಅಲ್ಲಿಯ ಪ್ರಾಂಶುಪಾಲರು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ. ಮೊನ್ನೆ ಇದರ ಕುರಿತು ಅಪರ ಜಿಲ್ಲಾಧಿಕಾರಿ ಮತ್ತು ಡಿಡಿಪಿಯುಯವರಿಗೆ ಮನವಿ ಮಾಡಿದ್ದು, ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ನಿನ್ನೆ ಪುನಃ ಆ ವಿದ್ಯಾರ್ಥಿನಿಯರನ್ನು ಇದೇ ಕಾರಣಕ್ಕೆ ತರಗತಿಯಿಂದ ಹೊರ ಹಾಕಿದ್ದಾರೆ. ಅಲ್ಲಿಯ ಪ್ರಾಂಶುಪಾಲರನ್ನು ವಜಾಗೊಳಿಸಬೇಕು ಅದಲ್ಲದೇ ಪ್ರಾಧ್ಯಾಪಕರು ಹಾಜರಾತಿ ನೀಡದ ಕಾರಣ ಅವರ ಮೇಲೂ ಕಠಿಣ ಕ್ರಮ ಜರುಗಿಸಬೇಕು. ಅಲ್ಲಿ ನಡೆಯುತ್ತಿರುವ ಧಾರ್ಮಿಕ ತಾರತಮ್ಯವನ್ನು ನಿಲ್ಲಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಬೇಕು. ಇಲ್ಲದಿದ್ದರೆ ತೀವ್ರ ರೀತಿಯ ಹೋರಾಟವನ್ನು ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ಪತ್ರಿಕಾಗೋಷ್ಠಿಯ ಮುಖಾಂತರ ತಿಳಿಸಿದರು.ಈ ಸಂದರ್ಭದಲ್ಲಿ ಮಸೂದ್ ಮನ್ನ ರಾಜ್ಯ ಸಮಿತಿ ಸದಸ್ಯರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ, ಅಸೀಲ್ ಅಕ್ರಮ್ ಜಿಲ್ಲಾಧ್ಯಕ್ಷರು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಝಮ್ ಝಮ್ ಜಿಲ್ಲಾ ಉಪಾಧ್ಯಕ್ಷೆ ಉಡುಪಿ, ಮತ್ತು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*