ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿಗೆ ಸಂಬಂಧಿಸಿದ 2.77 ಎಕರೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪನ್ನು ಶನಿವಾರ ಪ್ರಕಟಿಸಿದ್ದು, ವಿವಾದಿತ ಜಮೀನು ರಾಮಲಲ್ಲಾ ಪಾಲಾಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದೆ.
134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಳ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದದ ಕುರಿತು ಐವರು ಜಸ್ಟೀಸ್ ಗಳು ತೀರ್ಪನ್ನು ಘೋಷಿಸಿದ್ದಾರೆ.
ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ನೀಡಿದ್ದು, ರಾಮ ಮಂದಿರ ನಿರ್ಮಿಸಲು ನಿಯಮ ರೂಪಿಸಿ ಎಂದು ಸೂಚಿಸಿದೆ. ರಾಮಜನ್ಮಭೂಮಿಯ ಸ್ವಾಧೀನವನ್ನು ಟ್ರಸ್ಟ್ ಗೆ ನೀಡಬೇಕು. ಸುನ್ನಿ ವಕ್ಫ್ ಬೋರ್ಡ್ ಗೆ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲೇ ಸೂಕ್ತ ಸ್ಥಳ ನೀಡಬೇಕು ಎಂದು ಐತಿಹಾಸಿಕ ತೀರ್ಪು ನೀಡಿದೆ.
ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕರೆ ಜಮೀನು ನೀಡಬೇಕು. 3 ತಿಂಗಳೊಳಗೆ ಟ್ರಸ್ಟ್ ರಚಿಸುವಂತೆ ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ನಿರ್ದೇಶನ ನೀಡಿದೆ. ಈ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ.
ವಿವಾದಿತ 2.77 ಎಕರೆ ಭೂಮಿ ರಾಮಮಂದಿರ ನಿರ್ಮಾಣಕ್ಕೆ ಸಿಕ್ಕಂತಾಗಿದೆ. ಪರ್ಯಾಯ ಜಮೀನಿನಲ್ಲಿ ಮಸೀದಿ ನಿರ್ಮಿಸಿದ್ದು ಸುನ್ನಿ ವಕ್ಫ್ ಬೋರ್ಡ್ ಗೆ ಬಿಟ್ಟಿದ್ದು ಎಂದು ಪೀಠ ಹೇಳಿದೆ.
Be the first to comment