ರಾಜ್ಯ ಸುದ್ದಿಗಳು
ಉಡುಪಿ
ಸರಕಾರಿ ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಲು ಅನುಮತಿ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಲ್ಯ ಧರಿಸಲು ಅನುಮತಿ ಕೊಡಲೇಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಲು ಅನುಮತಿ ಕೇಳುತ್ತಿರುವುದು ಸರಿಯಲ್ಲ. ಶಿಕ್ಷಣ ಸಂಸ್ಥೆ, ಶಾಲೆಗಳಲ್ಲಿ ಮಕ್ಕಳು ಒಂದೇ ರೀತಿಯಲ್ಲಿ ಇರಬೇಕು. ಶಾಲೆಗಳಲ್ಲಿ ಮತಕ್ಕೊಂದು ಉಡುಗೆ ತೊಡುಗೆ ಸರಿಯಲ್ಲ. ಏಕರೀತಿಯ ಶಿಕ್ಷಣ ಮತ್ತು ಏಕರೀತಿಯ ಸಮವಸ್ತ್ರ ಅಗತ್ಯ. ಶಿಕ್ಷಣ ನೀತಿ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ರೀತಿ ಇರಬೇಕು. ಒಂದು ವೇಳೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿಲು ಅನುಮತಿ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಲ್ಯ ಧರಿಸಲು ಅನುಮತಿ ನೀಡಬೇಕು. ಇಲ್ಲವೇ ಎಲ್ಲಾ ವಿದ್ಯಾರ್ಥಿಗಳಿಗೂ ಒಂದೇ ರೀತಿಯ ಸಮವಸ್ತ್ರ ಕಡ್ಡಾಯ ಮಾಡಿ ಎಂದು ದಿನೇಶ್ ಮೆಂಡನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Be the first to comment