ಅಲ್ಪಸಂಖ್ಯಾತ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ:ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳಲಿ : ಧನ್ಯಕುಮಾರ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಅಲ್ಪಸಂಖ್ಯಾತರಿಗಾಗಿಯೇ ರೂಪಿಸಲಾದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಧನ್ಯಕುಮಾರ ಗುಂಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಕೇಂದ್ರ ಹಾಗೂ ರಾಜ್ಯದ ವಿವಿಧ ಪುರಷ್ಕøತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಮುಖ್ಯವಾಗಿದ್ದು, ವಿವಿಧ ಇಲಾಖೆಯಲ್ಲಿರುವ ಯೋಜನೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ತರಲು ಮುಂದಾಗಬೇಕು ಎಂದರು. ನಂತರ ಅಲ್ಪಸಂಖ್ಯಾತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ಜಿಲ್ಲಾ ನಗರಾಭಿವೃದ್ದಿ ಕೋಶ, ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ 2220 ಅಂಗನವಾಡಿ ಕೇಂದ್ರಗಳ ಪೈಕಿ 207 ಅಲ್ಪಸಂಖ್ಯಾತರ ಅಂಗನವಾಡಿ ಇದ್ದು, ಅದರಲ್ಲಿ 141 ಅಂಗನವಾಡಿ ಕಾರ್ಯಕರ್ತೆ, 199 ಸಹಾಯಕಿಯರು ಇದ್ದಾರೆ. ಗರ್ಭಿಣಿಯರು 3526, ಬಾಣಂತಿಯರು 3259 ಇದ್ದಾರೆ. ಭಾಗ್ಯಲಕ್ಷ್ಮೀ ಯೋಜನೆಯಡಿ 650 ಜನ ಅಲ್ಪಸಂಖ್ಯಾತರ ಫಲಾನುಭವಿಗಳು ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ 1582 ಫಲಾನುಭವಿಗಳಿರುವುದಾಗಿ ಸಭೆಗೆ ತಿಳಿಸಿದಾಗ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಆಯೋಗದ ಸದಸ್ಯರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ ಮಾತನಾಡಿ ಜಿಲ್ಲೆಯಲ್ಲಿ 147 ಸರಕಾರಿ ಪ್ರಾಥಮಿಕ ಉರ್ದು ಶಾಲೆ ಹಾಗೂ 19 ಪ್ರೌಢಶಾಲೆಗಳಿವೆ. ಒಟ್ಟು 13830 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲೀಷ ಮಾಧ್ಯಮ ಶಾಲೆಗಳಲ್ಲಿ 20 ಸಾವಿರ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳಿದ್ದಾರೆ. ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. 4131 ಅಂಗವಿಕಲ ಅಲ್ಪಸಂಖಯಾತು ಇದ್ದಾರೆ. ಮಕ್ಕಳಿಗೆ ಬೆಳಿಗ್ಗೆ ಹಾಲು, ಮದ್ಯಾಹ್ನದ ಬಿಸಿಊಟ ನೀಡಾಗುತ್ತಿದೆ ಎಂದು ತಿಳಿಸಿದಾಗ ಮೊಟ್ಟೆ ಬಗ್ಗೆ ಕೇಳಿದಾಗ ಬಾಗಲಕೋಟೆ ಜಿಲ್ಲೆಯಲ್ಲಿ ಇನ್ನು ಪ್ರಾರಂಭಗೊಂಡಿರುವುದಿಲ್ಲವೆಂದು ತಿಳಿಸಿದರು.

ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎನ್.ಮೇಲಿನಮನಿ ಮಾತನಾಡಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನ ಒಟ್ಟು 2,49,477 ಇದ್ದಾರೆ. ಪ್ರತಿ ತಾಲೂಕಿಗೆ ಒಂದರಂತೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ತೆರೆಯಲಾಗಿದೆ. ವಿದ್ಯಾರ್ಥಿ ವೇತನಕ್ಕೆ 42 ಸಾವಿರಕ್ಕೂ ಹೆಚ್ಚು ಆನ್‍ನಲ್ಲಿ ಅರ್ಜಿ ಸಲ್ಲಿಸಿರುತ್ತಾರೆ. ಅಲ್ಪಸಂಖ್ಯಾತರ ಶಾಲೆ, ವಿವಿಧ ವಸತಿ ನಿಲಯಗಳಿಗೆ ಇಲ್ಲಿಯವರೆಗೆ ಒಟ್ಟು 36 ಎಕರೆ ಜಮೀನು ಪಡೆದಿರುವುದಾಗಿ ಸಭೆಗೆ ತಿಳಿಸಿದರು.

ಉದ್ಯೋಗ ವಿನಯಮಯ ಕಚೇರಿಯಲ್ಲಿ ಪ್ರಸಕ್ತ ಸಾಲಿನಲ್ಲಿ 627 ಅಲ್ಪಸಂಖ್ಯಾತರು ನೊಂದಣಿ ಮಾಡಿರುವುದಾಗಿ ತಿಳಿಸಲಾಯಿತು. ನಗರ ವಸತಿ ಯೋಜನೆಯಡಿ 2017-18ರಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ 2616 ಫಲಾನುಭವಿಗಳ ಪೈಕಿ ಶೇ.10 ರಷ್ಟು ಅಲ್ಪಸಂಖ್ಯಾತರಿಗೆ ಮೀಸಲಿರಿಸಿ ಅದರಲ್ಲಿ 262 ಮನೆಗಳು ಇರುತ್ತವೆ. ಪಂಚಾಯತ ರಾಜ್ ವಸತಿ ವಿಭಾಗದಿಂದ ಕಳೆದ 3 ವರ್ಷದಿಂದ ಗುರಿ ನೀಡಿರುದಿಲ್ಲವೆಂದು ಸಭೆ ತಿಳಿಸಲಾಯಿತು. ನಂತರ ಕೌಶಲ್ಯ ತರಬೇತಿ, ಕೊಳಗೇರಿ ಅಭಿವೃದ್ದಿ, ಅಲ್ಪಸಂಖ್ಯಾಥರ ಅಭಿವೃದ್ದಿ ನಿಗಮದ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*