ಜಿಲ್ಲಾ ಸುದ್ದಿಗಳು
ಯಲ್ಲಾಪುರ
ಯಲ್ಲಾಪುರ ಪಟ್ಟಣದ ಶಾರದಾಗಲ್ಲಿಯಲ್ಲಿ ಕಾರ್ಮಿಕ ಇಲಾಖೆಯ ನೂತನ ಕಚೇರಿ ನಿರ್ಮಾಣಕ್ಕಾಗಿ 2.60 ಕೋಟಿ ರೂ.ಗಳ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.ಈ ಕಟ್ಟಡವು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದ್ದು, 672 ಚ.ಮೀ ವಿಸ್ತೀರ್ಣ ಹೊಂದಿದ್ದು, 3 ಮಹಡಿಯ ಕಟ್ಟಡ ಇದಾಗಿದೆ. ನೆಲ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ತನ್ನದೇ ಆದ ಕಟ್ಟಡ ಇಲ್ಲದಿರುವುದರಿಂದ ಈ ಕಟ್ಟಡವನ್ನು ಯಲ್ಲಾಪುರ ಮತ್ತು ಮುಂಡಗೋಡಗಳಲ್ಲಿ ನಿರ್ಮಿಸಲಾಗುತ್ತಿದ್ದು, ಹಂತಹAತವಾಗಿ ಉಳಿದ ತಾಲೂಕುಗಳಿಗೆ ವಿಸ್ತರಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ ಎಂದು ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮಿತ ಅಂಗಡಿ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ, ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ, ಮುರಲಿ ಹೆಗಡೆ, ಕಾರ್ಮಿಕ ಇಲಾಖಾಧಿಕಾರಿಗಳು, ಕಟ್ಟಡ ಗುತ್ತಿಗೆದಾರರು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Be the first to comment