ಯುವ ಕಾಂಗ್ರೆಸ್ ಸದೃಢಕ್ಕೆ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ – ೪೦ಕ್ಕೂ ಹೆಚ್ಚು ಯುವಕರು ಯುವಕಾಂಗ್ರೆಸ್‌ಗೆ ಸೇರ್ಪಡೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ 

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷರಾಮಯ್ಯ ಸಮ್ಮೂಕದಲ್ಲಿ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಆರ್.ನಾಗೇಶ್ ನೇತೃತ್ವದಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು.ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷರಾಮಯ್ಯ ಮಾತನಾಡಿ, ಸರಕಾರದಿಂದ ನೆನ್ನೆ ರಾತ್ರಿ ಲಾಕ್‌ಡೌನ್ ಘೋಷಿಸಿದ್ದಾರೆ. ಅದರ ಸಲುವಾಗಿ ಸಾವಿರ ಜನ ಸೇರುವ ಕಾರ್ಯಕ್ರಮದಲ್ಲಿ ಕಡಿಮೆ ಮಾಡಿ ಜಿಲ್ಲಾ ಮಟ್ಟದಲ್ಲಿ ಯುವ ಕಾಂಗ್ರೆಸ್ ಬಲವರ್ಧನೆಗೆ ಕಾರ್ಯಕ್ರಮ ನಡೆಸಲಾಗಿದೆ. ಮೇಕೆ ದಾಟು ಪಾದಯಾತ್ರೆಗೆ ನಮ್ಮ ನೀರು ನಮ್ಮ ಹಕ್ಕು ಎಂಬ ಘೋಷನೆಯೊಂದಿಗೆ ಸಭೆಯನ್ನು ನಡೆಸಲಾಗಿದೆ. ನಮ್ಮ ಎಲ್ಲಾ ಯುವಕರಿಗೆ ಕರೆಯನ್ನು ಕೊಟ್ಟು ನೀರಿಗಾಗಿ ಹೋರಾಟ ಮಾಡಲು ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇಡೀ ವಿಶ್ವ ಮತ್ತು ದೇಶದಲ್ಲಿ ಅತೀ ಹೆಚ್ಚು ಯುವಕರನ್ನು ಹೊಂದಿರುವ ಯುವ ಕಾಂಗ್ರೆಸ್ ಆಗಿದೆ. ರಾಜ್ಯದಲ್ಲಿಯೇ ೮.೫ಲಕ್ಷ ಸದಸ್ಯತ್ವ ಇದೆ. ಯುವಕರಿಗೆ ಉದ್ಯೋಗವಕಾಶ, ವಿದ್ಯಾರ್ಥಿ ಹೋರಾಟ, ಹೀಗೆ ಹಲವಾರು ರೀತಿಯಲ್ಲಿ ಕಾರ್ಯಕ್ರಮಗಳನ್ನು ಯುವ ಕಾಂಗ್ರೆಸ್‌ನಲ್ಲಿ ಮಾಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ಒಂದೂವರೆ ಎರಡು ವರ್ಷವಾಗುತ್ತ ಬರುತ್ತಿದೆ. ಸರಕಾರದ ಏನೇ ನಿಯಮಗಳನ್ನು ನೀಡಿದರೂ ಪಾಲನೆ ಮಾಡಲಾಗಿದೆ. ಸರಕಾರ ಕೋವಿಡ್ ನಿಯಂತ್ರಣ ತರುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ರು. 

CHETAN KENDULI

ಇನ್ನೂ ಸಭೆಯ ನಂತರ ೪೦ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಯುವ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಈ ವೇಳೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್ ಆದೇಶ ಪತ್ರಗಳನ್ನು ವಿತರಿಸಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಮಾಜಿ ಶಾಸಕ ವೆಂಕಟಸ್ವಾಮಿ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿ.ಜಗನ್ನಾಥ್, ರಾಜ್ಯ ಯುವ ಕಾಂಗ್ರೆಸ್‌ನ ಸಂಘಟನ ಸಂಚಾಲಕ ಮಾರುತಿ ಮಾತನಾಡಿದರು. ಈ ವೇಳೆಯಲ್ಲಿ ದೇವನಹಳ್ಳಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಆರ್.ಸುಮಂತ್, ಬ್ಲಾಕ್ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಹಾಜರಿದ್ದರು.

Be the first to comment

Leave a Reply

Your email address will not be published.


*