ತಾಪಂ ಕಚೇರಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ – ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸುವ ಮತ್ತು ಹಂಚಿಕೆ ವಿಚಾರ ಚರ್ಚೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ 

ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸುವ ಮತ್ತು ಹಂಚಿಕೆ ಮಾಡುವ ವಿಷಯದಡಿಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವ ಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೂಡಲೇ ಜನ ಸಮಾನ್ಯರ ಮತ್ತು ಬಡವರ ಪರವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ತಾಪಂ ಇಒ ಎಚ್.ಡಿ.ವಸಂತ್‌ಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಮತ್ತು ನಿವೇಶನ ಜಾಗದ ಸಮಸ್ಯೆಗಳ ಬಗ್ಗೆ ವಿಶೇಷ ಸಮಾಲೋಚನೆ ನಡೆಸಿದರು. 

CHETAN KENDULI

ಇನ್ನೂ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸುವ ಮತ್ತು ಹಂಚಿಕೆ ಮಾಡುವ ಬಗ್ಗೆ ಏನೇನು ಮಾಡ್ಬೇಕು ಮತ್ತು ಏನೇನು ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದರ ಬಗ್ಗೆ ಚರ್ಚಿಸಲಾಯಿತು. ಅಧಿಕಾರಿಗಳು ಸರಕಾರದ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಮಾಡುವಂತೆ ಸೂಚಿಸಿದರು. ಈ ವೇಳೆಯಲ್ಲಿ ಇಒ ಎಚ್.ಡಿ.ವಸಂತ್‌ಕುಮಾರ್, ಪಿಡಿಒಗಳು, ಆರ್‌ಐಗಳು, ಕಂದಾಯ ಇಲಾಖಾಧಿಕಾರಿಗಳು, ಗ್ರಾಮ ಸಹಾಯಕರು ಇದ್ದರು.

Be the first to comment

Leave a Reply

Your email address will not be published.


*