ರಾಜ್ಯ ಸುದ್ದಿಗಳು
ದೇವನಹಳ್ಳಿ
ಜೆಡಿಎಸ್ ಪಕ್ಷವೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದಿಂದ ಬಲಗೊಳ್ಳುತ್ತಿದೆ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಹಾರೋಹಳ್ಳಿ ಗ್ರಾಪಂ ಸದಸ್ಯ ಮುನಿರಾಜು ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರವರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಸಾಕಷ್ಟು ಜನಪರ ಕೆಲಸಗಳು ಮತ್ತು ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗಿದೆ. ಮಹಿಳೆಯರಿಗೆ ವಿಶೇಷ ಸ್ಥಾನಮಾನ ತಂದುಕೊಟ್ಟಂತಹ ಏಕೈಕ ಪ್ರಾದೇಶಿಕ ಪಕ್ಷ ಅದು ಜೆಡಿಎಸ್ ಪಕ್ಷವಾಗಿದೆ. ಹಲವಾರು ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಬರುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಆನೆ ಬಲ ಬಂದಂತಾಗಿದೆ. ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಿ ಆಯಾ ಭಾಗದ ಮುಖಂಡರು ಹೆಚ್ಚಿನ ಶ್ರಮವಹಿಸಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಮುನಿರಾಜು ಅವರನ್ನು ಶಾಸಕ ಎಲ್.ಎನ್.ನಾರಾಯಣಸ್ವಾಮಿ ಪಕ್ಷದ ಶಾಲು ಹಾಕುವುದರ ಮೂಲಕ ಅಭಿನಂದಿಸಿದರು.ಜೆಡಿಎಸ್ ತಾಲೂಕು ಅಡಖ್ ಕಮಿಟಿ ಅಧ್ಯಕ್ಷ ಆರ್.ಮುನೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಕೀಲ ಮುನಿರಾಜು, ಹೋಬಳಿ ಅಧ್ಯಕ್ಷ ವೀರಪ್ಪ, ಮುಖಂಡರಾದ ಎ.ಸಿ.ನಾಗರಾಜು, ಕಲ್ಯಾಣಬಾಬು, ಅರುಣಪ್ಪ, ಸುಬ್ಬೇಗೌಡ, ಕಾರ್ಯಕರ್ತರು ಇದ್ದರು.
Be the first to comment