ಜಿಲ್ಲಾ ಸುದ್ದಿಗಳು
ಮಸ್ಕಿ
ತಾಲೂಕಿನ ಗುಡದೂರು ವಳ ಬಳ್ಳಾರಿ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಹಾಗೂ ಬಸನಗೌಡ ಬಾದರ್ಲಿ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡಲಾಯಿತು. ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಬಳಗನೂರ್ ಡಾ” ದಾವಲ್ ಸಾಬ್ ಮಾತನಾಡಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡಲಾಗಿದೆ. ಇದೀಗ 15 ರಿಂದ18 ವರ್ಷದ ವಿದ್ಯಾರ್ಥಿಗಳ ಲಸಿಕೆಯನ್ನು ಪಡೆಯಬೇಕು ಮೊದಲೆರಡು ಅಲೆ ಗಳಿಗಿಂತ ಮೂರನೇಯ ಅಲೆಯು ಅತಿ ವೇಗವಾಗಿ ಸೋಂಕು ಹರಡುತ್ತಿದೆ. ಕೋರೋನ ವನ್ನು ಮಣಿಸಲು ಲಸಿಕೆ ಅನಿವಾರ್ಯವಾಗಿದೆ.
ಕೊರೋನಾ ಸೋಂಕಿನ ಮೂರನೇ ಅಲೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ, ಸಾಮಾಜಿಕ ಅಂತರ ಕಾಪಾಡಬೇಕು. ಜತೆಗೆ ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲಾ ಕಟ್ಟು ನಿಟ್ಟಿನ ನಿಯಮಗಳನ್ನು ಪಾಲನೆ ಮಾಡುವ ಜತೆಗೆ, ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಈ ಮೂಲಕ ಮೂರನೇ ಅಲೆಯಿಂದ ಪಾರಾಗುವ ಪ್ರಯತ್ನ ಮಾಡೋಣ ಎಂದು ಕೋರಿದ್ದಾರೆ.ಈ ಸಂದರ್ಭದಲ್ಲಿ , ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿ ವರ್ಗದವರು ಕಾಲೇಜ್ ಉಪನ್ಯಾಸಕರು ಮತ್ತು ಪ್ರೌಢ ಶಾಲೆಯ ಮುಖ್ಯಗುರುಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Be the first to comment