ರಾಜಕೀಯ ಸುದ್ದಿಗಳು
ಬೆಂಗಳೂರು:: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಬಿಜೆಪಿ ಸರ್ಕಾರದ ಬಗ್ಗೆ ಮೃದು ಮಾತುಗಳನ್ನಾಡಿದ್ದರು.
15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಕಿಂತ ಕಡಿಮೆ ಸ್ಥಾನ ಗಳಿಸಿದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅತಂತ್ರ ಸ್ಥಿತಿ ತಲುಪಲಿದ್ದು, ಜೆಡಿಎಸ್ ಬೆಂಬಲ ನೀಡಬಹುದೆಂದು ಹೇಳಲಾಗಿತ್ತು.
ಆದರೆ ನಿನ್ನೆ ಮಂಗಳೂರಿನಲ್ಲಿ ದೇವೇಗೌಡರು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರಕ್ಕೆ ಅತಂತ್ರ ಸ್ಥಿತಿ ಎದುರಾದರೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಅವಲಂಬಿಸಿ ಜೆಡಿಎಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಪಕ್ಷ ಕಟ್ಟಲು ಸಮಯಬೇಕಿದೆ ಎಂದು ಹೇಳುವ ಮೂಲಕ ಮಧ್ಯಂತರ ಚುನಾವಣೆಗೆ ಹೋಗದಿರುವ ಸುಳಿವು ನೀಡಿದ್ದಾರೆ.
ಒಂದು ವೇಳೆ ಬಿಜೆಪಿ ಸರ್ಕಾರ ಅತಂತ್ರ ಸ್ಥಿತಿ ತಲುಪಿದರೆ ಕಾಂಗ್ರೆಸ್ ಜೊತೆ ಸೇರಿ ಜೆಡಿಎಸ್ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬಿಜೆಪಿ ಬಗ್ಗೆ ನಾನು ಮೃದುಧೋರಣೆ ಹೊಂದಿಲ್ಲ.ನಮ್ಮ ಪಕ್ಷ ಕೂಡ ಅಂತಹ ನಿಲುವನ್ನು ಹೊಂದಿಲ್ಲ ಎಂದು ಗೌಡರು ತಿಳಿಸಿದ್ದಾರೆ. ಜೆಡಿಎಸ್ ಪಕ್ಷವನ್ನು ನಿರ್ಲಕ್ಷಿಸಿ ಯಾರು ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಉಪಚುನಾವಣೆ ಮತ್ತು ಮಧ್ಯಂತರ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ ಮುನ್ನಡೆಸಲು ಸಾಧ್ಯ
Be the first to comment