ರಾಜ್ಯ ಸುದ್ದಿಗಳು
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗುಡ್ಡದಲ್ಲಿರುವ ಯಲ್ಲಮ್ಮನ ದೇವಸ್ಥಾನಕ್ಕೆ ಭಕ್ತರು ಬರದಂತೆ ತಕ್ಷಣದಿಂದ ಮುಂದಿನ ಆದೇಶದವರೆಗೆ ನಿಷೇಧ ವಿಸ್ತರಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೆಳಗಾವಿ: ಕೋವಿಡ್ ಕಾರಣಕ್ಕೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗುಡ್ಡದಲ್ಲಿರುವ ಶ್ರೀ ಯಲ್ಲಮ್ಮನ ದೇವಸ್ಥಾನಕ್ಕೆ ಹಾಗೂ ಜಿಲ್ಲೆಯ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಭಕ್ತರು ಬರದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದರ್ಶನ ನಿಷೇಧ ವಿಸ್ತರಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಜನರ ಸುರಕ್ಷತೆಗಾಗಿ ನಿಷೇಧ ಮುಂದುವರೆಸಲಾಗಿದೆ. ಆದರೆ, ಅನಿರ್ದಿಷ್ಟ ಅವಧಿಗೆ ದೇವಿ ದರ್ಶನಕ್ಕೆ ನಿಷೇಧ ಹೇರಿದ ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರಣ, ಸಭೆ, ಸಮಾರಂಭಗಳಿಗೆ ಇಲ್ಲದ ಕೊರೊನಾ ಮಾರ್ಗಸೂಚಿಗಳು ಯಲ್ಲಮ್ಮನ ದೇವಿ ದರ್ಶನಕ್ಕೆ ಯಾಕೆ ಎನ್ನುತ್ತಿದ್ದಾರೆ. ಹೀಗಾಗಿ ಆದಷ್ಟು ಬೇಗ ಯಲ್ಲಮ್ಮ ದೇವಿಯ ದರ್ಶನಕ್ಕೆ ಅವಕಾಶ ನೀಡಬೇಕು ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.
Be the first to comment