ರಾಜ್ಯ ಸುದ್ದಿಗಳು
ದೇವನಹಳ್ಳಿ
ಪಟ್ಟಣದ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಎಲ್ ಎನ್ ನಾರಾಯಣಸ್ವಾಮಿ ಉದ್ಘಾಟಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಶಾಸಕರು ಪಾರಿವಾಳ ಮತ್ತು ಬಲೂನ್ಗಳನ್ನು ಹಾರಿಸುವುದರ ಮೂಲಕ ಶುಭಕೋರಿದರು. ನಂತರ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘದಿಂದ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡಿರುವುದು ಶ್ಲಾಘನೀಯ. ನಿಮ್ಮೊಂದಿಗೆ ಸದಾ ಸಕಾರಾತ್ಮಕವಾಗಿ ಇರುತ್ತೆನೆ. ಇದುವರೆಗೆ ಯಾವೊಬ್ಬ ಅಧಿಕಾರಿಯ ಮೇಲೆ ಒತ್ತಡ ಹಾಕಿಲ್ಲ. ಸಾರ್ವಜನಿಕರ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.
ಸಂಘದ ನೂತನ ರಾಜ್ಯ ಉಪಾಧ್ಯಕ್ಷ ಹೆಚ್.ಬಾಲಕೃಷ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇನ್ನೂ ಕ್ರೀಡಾಕೂಟದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಪಾಲ್ಗೊಂಡಿದ್ದರು. ಈ ವೇಳೆ ಪುರಸಭಾ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪ ಲತಾ ಲಕ್ಷ್ಮೀ ನಾರಾಯಣ, ಜಿಲ್ಲಾಡಳಿತ ಭವನದ ಆರ್ ಹೆಚ್ ಎಂ ಗಂಗಾಧರ್, ಪುರಸಭಾಧಿಕಾರಿ ನಾಗರಾಜ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆದರ್ಶ, ತಾಲೂಕು ಮಟ್ಟದ ಸರ್ಕಾರಿ ನೌಕರರು, ದೈಹಿಕ ಶಿಕ್ಷಣ ಶಿಕ್ಷಕರು, ಮತ್ತಿತರರು ಇದ್ದರು.
Be the first to comment