ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲದಿಂದ ಪಂಜಾಬ್ ಸರಕಾರ ದ ವಿರುದ್ಧ ಪ್ರತಿಭಟನೆ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

 

ಭಟ್ಕಳ

CHETAN KENDULI

ದೇಶದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಸೂಕ್ತ ಭದ್ರತೆ ಒದಗಿಸಲು ವಿಫಲವಾದ ಪಂಜಾಬಿನ ಚರಣಜಿತ್ ಸಿಂಗ್ ಚೆನ್ನಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಹಾಗೂ ಉದ್ದೇಶಪೂರ್ವಕವಾಗಿ ಭದ್ರತಾ ವೈಫಲ್ಯದ ಷಡ್ಯಂತ್ರದಲ್ಲಿ ಭಾಗಿಯಾಗಿದ್ದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಮಾನ್ಯ ಘನವೆತ್ತ ರಾಷ್ಟ್ರಪತಿಗಳಿಗೆ ಆಗ್ರಹ ಮಾಡಲು ಭಟ್ಕಳದ ಉಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರದ ಐಬಿಯಿಂದ ಮಿನಿ ವಿಧಾನಸೌಧದ ವರೆಗೆ ಕಾಂಗ್ರೆಸ್ ಪಕ್ಷದ ಶಡ್ಯಂತ್ರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಸುಬ್ರಾಯ ದೇವಾಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಗೋವಿಂದ ನಾಯ್ಕ, ಜಿಲ್ಲಾ ಹಿಂದುಳಿದ ಮೋರ್ಚಾದ ಅಧ್ಯಕ್ಷರಾದ ಶ್ರೀ ರವಿ ನಾಯ್ಕ ಜಾಲಿ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತರಾಮ್, ಮಂಡಲದ ಪ್ರಭಾರಿಗಳಾದ ಶ್ರೀ ಪ್ರಶಾಂತ್ ನಾಯ್ಕ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಷ್ಣುಮೂರ್ತಿ ಹೆಗಡೆ, ಮಂಡಲದ ಕಾರ್ಯದರ್ಶಿ ಶ್ರೀ ಭಾಸ್ಕರ್ ದೈಮನೆ, ಜಿಲ್ಲಾ ಮೋರ್ಚಾ ಹಾಗೂ ಪ್ರಕೋಷ್ಠದ ಪ್ರಮುಖರು, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿಕೇಂದ್ರದ ಪ್ರಮುಖರು, ಮಹಿಳಾ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

Be the first to comment

Leave a Reply

Your email address will not be published.


*