ಕೋವಿಡ್ ಬೂಸ್ಟರ್ ಡೋಸ್ ವಿತರಣೆಗೆ ಚಾಲನೆ: ರೋಗ ಉಲ್ಬಣಗೊಳ್ಳದಂತೆ ಎಚ್ಚರ ವಹಿಸಿ : ಕಾರಜೋಳ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಕೋವಿಡ್ 3ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗಿರುತ್ತಿರುವದರಿಂದ ಜನರು ಸ್ವ-ಪ್ರೇರಣೆಯಿಂದ ಎಚ್ಚರಿಕೆ ವಹಿಸಬೇಕೆಂದು ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ನವನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಎ.ಎನ್.ಎಂ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕೋವಿಡ್ ಬೂಸ್ಟರ್ ಡೋಜ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು ಆರೋಗ್ಯ ಕಾರ್ಯಕರ್ತರು ಪ್ರಂಟಲೈನ್ ವಾರಿಯರ್ಸ್ ಹಾಗೂ 60 ವರ್ಷ ಮೆಲ್ಪಟ್ಟವರಿಗೆ ಬೂಸ್ಟರ್ ಡೋಜ್ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ ಎಂದರು.

ಕರೋನಾ ಬರುವ 2019ರ ನವೆಂಬರ ಪೂರ್ವದಲ್ಲಿ ದೇಶದಲ್ಲಿ 6.25 ಕೋಟಿ ಲಸಿಕೆ ಮಾತ್ರ ಉತ್ಪಾದನೆ ಆಗುತ್ತಿತ್ತು, ಇಂದು 250 ಕೋಟಿ ಜನರಿಗೆ ಲಸಿಕೆ ವ್ಯವಸ್ಥೆ ಮಾಡಲಾಗಿದೆ ಇದರಿಂದ ಭಾರತದೇಶ ಜಾಗತಿ ಮಟ್ಟದಲ್ಲಿ ಹೆಸರು ಮಾಡಿದರು. ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ದೇಶದ ಅನೇಕ ಆಸ್ಪತ್ರೆಗಳಲ್ಲಿ ಐಸಿಯು, ಆಕ್ಸಿಜನ್, ವೆಂಟೆಲೇಟರ್ ಸೇರಿದಂತೆ ಇತರೆ ಸೌಲಭ್ಯ, ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯನ್ನು ಕಳೆದ 2 ವರ್ಷದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಗಿಸಿವೆ ಎಂದರು.

ರಾಜ್ಯ ಸರಕಾರವು ಕೋವಿಡ್ ನಿರ್ವಹಣೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಕೊರೊನಾ ಪ್ರಾರಂಭವಾದಾಗ ರಾಜ್ಯದಲ್ಲಿ ಒಂದೇ ಒಂದು ಪ್ರಯೋಗಾಲಯ ಬೆಂಗಳೂರಿನಲ್ಲಿ ಇತ್ತು. ಈಗ 182 ಕೋವಿಡ್ ಪರೀಕ್ಷೆಯ ಪ್ರಯೋಗಾಲಯ ಪ್ರಾರಂಭಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಈ ಮೊದಲು ಕೊರೊನಾ ಪರೀಕ್ಷೆಯ ನಂತರ ಫಲಿತಾಂಶಕ್ಕಾಗಿ 15 ದಿನಗಳ ವರೆಗೆ ಕಾಯಬೇಕಾಗಿತ್ತು. ಇವತ್ತು ಆ ತೊಂದರೆ ಇಲ್ಲ. ಬಾಗಲಕೋಟೆ ಸಹ ಪ್ರಥಮ ಸ್ಥಾನದಲ್ಲಿದೆ. ಮೊದಲನೆ ಡೋಜ್‍ನಲ್ಲಿ 14,62,172 ಗುರಿಗೆ ನೂರರಷ್ಟು ಸಾಧನೆ ಮಾಡಲಾಗಿದೆ. ಎರಡನೇ ಡೋಜ್‍ನಲ್ಲಿ 11,36,154 ಲಸಿಕೆ ನೀಡಿ ಶೇ.78 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಮಕ್ಕಳಿಗಾಗಿ ಲಸಿಕೆ ನೀಡಲು ಪ್ರಾರಂಭವಾಗಿದ್ದು, 63,571 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಇನ್ನುಳಿದ ಮಕ್ಕಳು ಕೂಡಾ ಲಸಿಕೆ ಹಾಕಿಸಿಕೊಳ್ಳಬೇಕು. ಅವರ ಪಾಲಕರು ಕೂಡಾ ಭಯ ಪಡದೇ ಮಕ್ಕಳಿಗೆ ಲಸಿಕೆ ಹಾಕಿಸಲು ಮುಂದಾಗಬೇಕು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಮಕ್ಕಳು ಸೇರಿ ಒಟ್ಟು 2598325 ಜನರಿಗೆ ಲಸಿಕೆ ಹಾಕುವ ಕೆಲಸ ಜಿಲ್ಲೆಯಲ್ಲಿ ಮಾಡಲಾಗಿದೆ ಎಂದರು. ರಾಜ್ಯದ ಸರಾಸರಿಯಲ್ಲಿ ಟಾಪ್ ಸ್ಥಾನದಲ್ಲಿರುವುದಾಗಿ ತಿಳಿಸಿದರು. ರೋಗ ಉಲ್ಬಣವಾಗದಂತೆ ಸಾರ್ವಜನಿಕರು ಎಚ್ಚರ ವಹಿಸುವಂತೆ ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಲಸಿಕೆ ವಿತರಣೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. 1 ರಿಂದ 14 ವರ್ಷದವರಿಗೆ ಲಸಿಕೆ ನೀಡಲು ಪ್ರಾರಂಭವಾಗಿಲ್ಲ. ಆದರೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಪ್ರಾರಂಭಿಸಲಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಲು ಭಯ ಪಡಬಾರದು ಎಂದರು. ಇದೇ ಸಂದರ್ಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಇತರರು ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಂಡರು.

ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್. ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, 50 ಹಾಸಿಗೆ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*