ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಕೋವಿಡ್-19 ಮೂರನೆ ಅಲೆ ಹಿನ್ನೆಲೆಯಲ್ಲಿ ಹುನಗುಂದ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ಜನೇವರಿ-14 ರಂದು ನಡೆಯುವ ಸಿದ್ದಪ್ಪಜ್ಜನ ರಥೋತ್ಸವ ಸಾಂಕೇತಿಕವಾಗಿ ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಿಸಲಾಗುವುದು ಎಂದು ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಶ್ರೀಗಳು ಹೇಳಿದರು.
ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷ ಸಿದ್ದಪ್ಪಜ್ಜನ ಜಾತ್ರಾ ಮಹೋತ್ಸವ ನಿಮಿತ್ಯ ಮೂರು ದಿನಗಳ ಕಾಲ ಅದ್ದೂರಿಯಾಗಿ ಸಿದ್ದಶ್ರೀ ಉತ್ಸವ ನಡೆಸಲಾಗುತ್ತಿತ್ತು.ಆದರೆ ಈ ಬಾರಿ ಕೊರೊನಾ ಮೂರನೆ ಅಲೆ ಭೀತಿಯಿಂದ ಹಾಗೂ ಭಕ್ತರ ಆರೋಗ್ಯ ದೃಷ್ಟಿಯಿಂದ ಭಕ್ತರ ನಿರ್ಣಯದಂತೆ ಜ-14 ರಂದು ಸರಳವಾಗಿ ರಥೋತ್ಸವ ಜರುಗಲಿದೆ ಮತ್ತು 17 ರಂದು ಒಂದು ದಿನ ಮಾತ್ರ ಸರಳವಾಗಿ ರಾಷ್ಟ್ರೀಯ ಉತ್ಸವ ಜರುಗಲಿದೆ ಎಂದರು.
ರಥೋತ್ಸವ ಮತ್ತು ಉತ್ಸವಕ್ಕೆ ಆಗಮಿಸುವ ಭಕ್ತರು ಸರ್ಕಾರದ ನಿಯಮಾನುಸಾರ ಎರಡು ಡೋಸ್ ಲಸಿಕೆ ಪಡೆದಿರಬೇಕು,ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಜಾತ್ರಾ ಮಹೋತ್ಸವ ನಡೆಯಲು ಸಹಕರಿಸಬೇಕು ಎಂದರು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಕರ್ನಾಟಕ ರಕ್ಷಣಾ ವೇಧಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಘೋಷಣೆ ಮಾಡಲಾಗಿತ್ತು.ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಮಾರಂಭ ತಾತ್ಕಾಲಿಕವಾಗಿ ರದ್ದು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಮಾಡಲಾಗುವುದು ಎಂದರು.
Be the first to comment