ಅಂಗನವಾಡಿ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಬಾಗಲಕೋಟ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ನಗರ, ಗ್ರಾಮಗಳಲ್ಲಿ 2 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 20 ಅಂಗನವಾಡಿ ಸಹಾಯಕಿ ಹುದ್ದೆಗೆ ಆಗಸ್ಟ 5 ರಂದು ಪ್ರಕಟಣೆ ಹೊರಡಿಸಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿತ್ತು.

ಅದರಲ್ಲಿ ಹಿರೇಗುಳಾಬಾಳ-1 ಹಾಗೂ ಲವಳೇಶ್ವರ ಎಲ್.ಟಿ ಕೇಂದ್ರಗಳ ಹೊರತುಪಡಿಸಿ ಬಾಕಿ ಉಳಿದ ಅಂಗನವಾಡಿ ಕೇಂದ್ರಗಳ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸಿ.ಡಿ.ಪಿ.ಓ ಕಛೇರಿಯ ಸೂಚನಾ ಫಲಕಕ್ಕೆ ಅಳವಡಿಸಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಗೆ ತಕರಾರು ಇದ್ದಲ್ಲಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಜನವರಿ 13 ರಂದು ಕಛೇರಿಯ ಅವಧಿಯೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹಾಗೂ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ಜನವರಿ 14 ರಂದು ಬೆಳಿಗ್ಗೆ 10 ಘಂಟೆಗೆ ಅರ್ಜಿಯೊಂದಿಗೆ ಲಗತ್ತಿಸಿದ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ಬಾಗಲಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*