ಮಾತೃವಂದನಾ ಯೋಜನೆ : ಸಹಾಯಕರ ಹುದ್ದೆಗೆ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಹೊರಗುತ್ತಿಗೆ ಆಧಾರ ಮೇಲೆ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕ ಒಂದು ಹುದ್ದೆಯ ಭರ್ತಿಗಾಗಿ 11 ತಿಂಗಳ ಅವಧಿಗೆ ಅಥವಾ ಯೋಜನೆ ಜಾರಿಯಲ್ಲಿರುವವರೆಗೆ ಹಾಗೂ ಕಾರ್ಯಕ್ಷಮತೆ ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಮಾಸಿಕ 20 ಸಾವಿರ ಗೌರವಧನ ನೀಡಲಾಗುತ್ತಿದ್ದು, ಸಮಾಜ ವಿಜ್ಞಾನ, ಸಮಾಜಕಾರ್ಯ, ಗ್ರಾಮೀಣ ನಿರ್ವಹಣೆ, ಸಂಖ್ಯಾಶಾಸ್ತ್ರ ಇವುಗಳಲ್ಲಿ ಯಾವುದಾದರೊಂದು ಪದವಿ ಪಡೆದಿರಬೇಕು. 1 ವರ್ಷ ಅನುಭವ ಹೊಂದಿದ್ದು, ಕಂಪ್ಯೂಟರ ಜ್ಞಾನವಿರಬೇಕು. 18 ರಿಂದ 40 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸ್ವ-ವಿವರದೊಂದಿಗೆ ಎಲ್ಲ ದಾಖಲೆಗಳನ್ನು ಲಗತ್ತಿಸಿ, ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಜನವರಿ 24 ರಂದು ಸಂಜೆ 5.30 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಇವರಿಗೆ ಸಲ್ಲಿಸುವಂತೆ ಉಪನಿರ್ದೇಶಕಿ ಭಾರತಿ ಬಣಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*