ವಿವೇಕಾನಂದರ ತತ್ವ ಆದರ್ಶಗಳನ್ನು ಯುವ ಪೀಳಿಗೆ ಪಾಲಿಸುವಂತಾಗಬೇಕು : ಸಚಿವ ಎಂಟಿಬಿ ನಾಗರಾಜ್

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

ತಾಲೂಕಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಆಡಿಟೋರಿಯಂನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಯುವ ಜನ ಮೇಳ ಸ್ಪರ್ಧೆಯ ಕಾಯಕ್ರಮವನ್ನು ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಸಚಿವ ಎಂಟಿಬಿ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಸ್ವಾಮಿ ವಿವೇಕಾನಂದರ ೧೫೯ನೇ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮನುಷ್ಯ ಹುಟ್ಟಿದ ಮೇಲೆ ಸಾವು ಖಚಿತ, ದೇಶಕ್ಕೆ ಏನಾದರೂ ಕೊಡುಗೆ ನೀಡಿದಾಗ ಮನುಷ್ಯನಾಗಿ ಹುಟ್ಟಿದಕ್ಕೆ ಸಾರ್ಥಕತೆಯಾಗುತ್ತದೆ. ಸ್ವಾಮಿ ವಿವೇಕಾನಂದರೂ ಬಾಲ್ಯದಿಂದಲೇ ಅವರ ಛಾಪನ್ನು ಮೂಡಿಸುತ್ತಾ ಇಡೀ ವಿಶ್ವದ ಗಮನಸೆಳೆದಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಕೆರೆ ನೀಡಿದರು. 

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರ ಒಂದು ನಿರ್ಧಾರ ಮಾಡಿ ಯುವಜನೋತ್ಸವ ಕಾರ್ಯಕ್ರಮವನ್ನು ಮಾಡಬೇಕೆಂಬ ಆದೇಶ ಮಾಡಿರುವ ಹಿನ್ನಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯುವ ಜನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ವಾಮಿ ವಿವೇಕಾನಂದರು ಒಬ್ಬ ಫೈರ್ ಮ್ಯಾನ್ ಎಂದು ಹೇಳಬಹುದು. ಅವರು ಯುವಕರಲ್ಲಿ ಪ್ರೇರಣೆ ಮಾಡಿದವರಾಗಿದ್ದಾರೆ. ಇಡೀ ವಿಶ್ವಕ್ಕೆ ಅವರು ಚಿಕಾಗೋದಲ್ಲಿ ಮಾಡಿದ ಭಾಷಣದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಅಂದಿನ ಭಾಷಣ ಇಂದಿಗೂ ಪ್ರಸ್ತುತವಾಗಿದೆ. ಇವರ ಜಯಂತಿಯಲ್ಲಿ ಯುವಜನರು ಅತೀ ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಯೋಗ ಪಟುಗಳಿಗೆ ಯೋಗ ಪ್ರದರ್ಶನ ಮತ್ತು ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಪಂ ಸಿಇಒ ರೇವಣಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಗೀತಾ, ಆಲೂರು ದುದ್ದನಹಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮರಾಮಣ್ಣ, ಉಪಾಧ್ಯಕ್ಷೆ ಕಾಂತ.ಸಿ.ಮುನಿರಾಜು, ಜಿಲ್ಲಾಮಟ್ಟದ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಪದಾಧಿಕಾರಿಗಳು ಇದ್ದರು. 

Be the first to comment

Leave a Reply

Your email address will not be published.


*