ಕೋಳಿ ಸಾಕಾಣಿಕೆ ಫಲಾನುಭವಿಗಳಿಗೆ ಸರಕಾರದಿಂದ 10ಲಕ್ಷ ರೂ. ವಿತರಣೆ  : ಸಾಕೇಂತಿಕವಾಗಿ 4 ಅರ್ಹ ಫಲಾನುಭವಿಗಳಿಗೆ ವಿತರಣೆ ಕಾರ್ಯಕ್ಕೆ ಸಚಿವ ಎಂಟಿಬಿ ನಾಗರಾಜ್ ಚಾಲನೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

ಕೋಳಿ ಸಂಸ್ಕರಣಾ ಉತ್ಪನಗಳ ಮತ್ತು ಕೋಳಿ ಸಾಕಾಣಿಕಿಗೆದಾರರಿಗೆ ಕೇಂದ್ರ ಸರಕಾರದ ಅನುದಾನದಲ್ಲಿ ಅರ್ಹ ಫಲಾನುಭವಿಗಳನ್ನು 80 ಜನರನ್ನು ಗುರ್ತಿಸಿ ಸಾಂಕೇತಿಕವಾಗಿ ಅವರಿಗೆ ತಲಾ 10ಲಕ್ಷ ರೂ. ಮತ್ತು 35% ಸಬ್ಸಿಡಿಯನ್ನು ನೀಡುವುದರ ಮೂಲಕ ೪ ಜನ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಸಭಾಗಣದಲ್ಲಿ ಜಿಲ್ಲಾಮಟ್ಟದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ಅರಿವು ಮೂಡಿಸುವ ಕಾರ್ಯಗಾರವನ್ನು ಸಚಿವ ಎಂಟಿಬಿ ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಈ ಯೋಜನೆಗಳನ್ನು ವಿವಿಧ ಇಲಾಖೆಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ಕೋಳಿ ಸಾಕಾಣಿಕೆ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಉಳಿಕೆಯವರು ಸಹ ಅರ್ಜಿಯನ್ನು ಸಲ್ಲಿಸಿದ್ದಾರೆ. ಇನ್ನು ಅರ್ಜಿ ಸಲ್ಲಿಸುತ್ತಿದ್ದಾರೆ. ಸರಕಾರದ ಆದೇಶದ ಮೇರೆಗೆ ವಿಸ್ತರಣೆ ಮಾಡಲಾಗಿದೆ. ಇದರಿಂದ ರೈತರು ಮತ್ತು ಸಣ್ಣ ರೈತರು ಕೋಳಿ ಸಾಕಾಣಿಕೆ ಮಾಡುವುದರ ಮೂಲಕ ಆರ್ಥಿಕವಾಗಿ ಮುಂಬರಲೂ ಇಡೀ ದೇಶದಾದ್ಯಂತ ಈ ಕಾರ್ಯಕ್ರಮವನ್ನು ರೂಪಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಶಯದಂತೆ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರ ಹಾದಿಯಾಗಿ ಎಲ್ಲಾ ರೈತರಿಗೆ ಸಾಲ ಮಂಜೂರು ಮಾಡಿಕೊಡಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಪ್ರಧಾನ ಮಂತ್ರಿ ಕನಸಿನ ಕೂಸಾದ ಆತ್ಮನಿರ್ಭಾರ್ ಯೋಜನೆಯಡಿಯಲ್ಲಿ 80 ಜನರಿಗೆ ಗುರಿ ಹೊಂದಿದ್ದು, ಅದರಲ್ಲಿ ಬೆರಳಣಿಕೆಯಷ್ಟು ಮಾತ್ರ ಅರ್ಜಿಯನ್ನು ಫಲಾನುಭವಿಗಳು ಸಲ್ಲಿಸಿದ್ದಾರೆ. ತಲಾ 10ಲಕ್ಷ ರೂ.ಗಳಷ್ಟು ಗರಿಷ್ಠ 35% ಸಬ್ಸಿಡಿಯಲ್ಲಿ ನೀಡಲಾಗುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಆರ್ಥಿಕವಾಗಿ ಹಿಂದುಳಿದವರು ಮತ್ತು ಮದ್ಯಮವರ್ಗದವರು ಕೋಳಿ ಸಾಕಾಣಿಕೆ ಮಾಡಲು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೋಳಿ ಮಾಂಸ ಸೇವನೆ ಹೆಚ್ಚು ಇರುವುದರಿಂದ ಪೌಟ್ರಿಯಲ್ಲಿ ಕೋಳಿ ಸಾಕಾಣಿಕೆಗೆ ಸರಕಾರ ಸಬ್ಸಿಡಿಯಲ್ಲಿ ಸಾಲ ಸೌಲಭ್ಯ ನೀಡುತ್ತಿದೆ. ಇದರ ಸದುಪಯೋಗವನ್ನು ಸಂಘಸಂಸ್ಥೆಗಳಲ್ಲಿ ರೈತರಿಂದ ಅರ್ಜಿಗಳನ್ನು ಪಡೆದುಕೊಂಡು ಸಾಲ ಸೌಲಭ್ಯ ನೀಡುವಂತಾಗಬೇಕು ಎಂದು ಹೇಳಿದರು. ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಪಂ ಸಿಇಒ ರೇವಣಪ್ಪ, ಕೃಷಿ ಇಲಾಖೆ ಜಿಲ್ಲಾ ಉಪನಿರ್ದೇಶಕಿ ವಿನುತಾ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಮತ್ತಿತರರು ಇದ್ದರು.

Be the first to comment

Leave a Reply

Your email address will not be published.


*