ರಾಜ್ಯ ಸುದ್ದಿಗಳು
ಉಡುಪಿ
ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ಚರ್ಷನ್ ಮಾಡಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 2.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು (ACB Raid Udupi) ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಮೂವರು ಅಧಿಕಾರಿಗಳು ಎಸಿಬಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ.
ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಎಸಿಬಿ ಎಸ್‍ಪಿ ಸೈದಾಳಿ ನಡೆಸಲಾಗಿದೆ. ದಾಳಿಯ ವೇಳೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎಸಿಬಿ ವಶಕ್ಕೆ ಪಡೆದಿರುವ ಮೂವರು ಅಧಿಕಾರಿಗಳು ಲಂಚ ಪಡೆದರೂ ಕೂಡ ಕೆಲಸ ಮಾಡಿಕೊಡುವುದಿಲ್ಲ ಎಂಬ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಮೂವರು ಭ್ರಷ್ಟ ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಬದಲಾಯಿಸಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಂತಿಮವಾಗಿ ಎರಡೂವರೆ ಲಕ್ಷ ರೂಪಾಯಿ ಹಣವನ್ನು ಮೂವರು ಅಧಿಕಾರಿಗಳು ಪಡೆಯುತ್ತಿದ್ದ ವೇಳೆಯಲ್ಲಿ ಈ ದಾಳಿಯನ್ನು ನಡೆಸಲಾಗಿದೆ.
Be the first to comment