ಜಿಲ್ಲಾ ಸುದ್ದಿಗಳು
ಭಟ್ಕಳ
ಸರಕಾರದ ಕೊರೊನಾ ನಿಯಮಾವಳಿಯ ಕಾರಣ ಮುರ್ಡೆಶ್ವರ ದೇವಸ್ಥಾನದ ಮಹಾರಥೋತ್ಸವದಲ್ಲಿ ಯಾವುದೆ ವಿಜ್ರಂಬಣೆ ನಡೆಸುವಂತಿಲ್ಲಾ ದೇವಸ್ಥಾನದ ಒಳಾಂಗಣದಲ್ಲೆ ಸರಳ ರೀತಿಯಲ್ಲಿ ದೇವರ ಪೂಜಾ ಕೈಂಕರ್ಯವನ್ನು ನಡೆಸ ಬೇಕು ರಥೋತ್ಸವಕ್ಕೆ ಅವಕಾಶವಿರುವುದಿಲ್ಲಾ ಎಂದು ಸಹಾಯಕ ಆಯುಕ್ತೆ ಮಮತಾ ದೇವಿ ಹೇಳಿದರುವಿಶ್ವ ಪ್ರಸಿದ್ದ ಮಾತ್ಹೋಬಾರ ಶ್ರೀ ಮುರುಡೇಶ್ವರ ದೇವಸ್ಥಾನದ ಜಾತ್ರೆಗೆ ಸಂಬಂಧಿಸಿದಂತೆ ಸರಕಾರವೂ ಕೋವಿಡ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಕುರಿತಂತೆ ಕರೆದ ವಿಶೇಷ ಸಭೆಯಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಮಾತನಾಡಿ .ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಸದ್ಯ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವೂ ಕಾಲಿಕವಾಗಿ ಪರಿಷ್ಕøತ ಮಾರ್ಗಸೂಚಿ ಹೊರಡಿಸಿದೆ. ಜನವರಿ 11 ಮತ್ತು 12 ರಂದು ಹೊಸ ಮಾರ್ಗಸೂಚಿ ಹೊರಡಿಸಿರುವ ಸರಕಾರವೂ ದೇವಾಲಯಗಳ ಒಳಾಂಗಣದಲ್ಲಿ ದೈನಂದಿನ ಪೂಜಾ ಕಾರ್ಯಗಳಿಗೆ ಮಾತ್ರ ಅವಕಾಶವಿದ್ದು, ಹಾಗೂ ದೇವಾಲಯದ ಒಳಾಂಗಣದಲ್ಲಿ ಒಂದು ಬಾರಿಗೆ ಪೂರ್ಣ ಪ್ರಮಾಣದ ಲಸಿಕೆ ಪಡೆದ ಹಾಗೂ 48 ಗಂಟೆಯೊಳಗಿನ ಅವಧಿಯ ಗಂಟಲು ದ್ರವ ಪರೀಕ್ಷೆಯ ವರದಿಯೊಂದಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುವದರಿಂದ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಘಿ ಅನುಷ್ಠಾನಗೊಳಿಸಬೇಕು. ಈ ಕುರಿತು ಜನವರಿ 13 ರಂದು ಜಿಲ್ಲಾಧಿಕಾರಿಗಳು ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಕಟ್ಟುನಿಟ್ಟಾಗಿ ನಿರ್ದೇಶಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆ ಸರಕಾರದ ಕೋವಿಡ್ ಮಾರ್ಗಸೂಚಿಯನ್ನು ತಪ್ಪದೇ ಅನುಷ್ಠಾನಗೊಳಿಸುವ ಪ್ರಯುಕ್ತ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರಿಗೆ ಮಾಹಿತಿ ತಿಳಿಸುವ ಹಿನ್ನೆಲ ವಿಶೇಷ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.ಈ ಹಿಂದಿನ ಸಭೆಯಲ್ಲಿ ಹಿಂದಿನ ಮಾರ್ಗಸೂಚಿಯನುಸಾರವಾಗಿ ಸರಳವಾಗಿ ಮುರುಡೇಶ್ವರ ಜಾತ್ರಾ ಕಾರ್ಯಕ್ರಮವನ್ನು ದೇವಸ್ಥಾನದ ಧಾರ್ಮಿಕ ವಿಧಿ ವಿಧಾನಗಳಂತೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಬದಲಾದ ಮಾರ್ಗಸೂಚಿಯಿಂದ ಕೇವಲ ದೇವಾಲಯದ ಒಳಾಂಗಣದಲ್ಲಿ ದೇವರ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳಿಗೆ ಮಾತ್ರ ಅವಕಾಶ ಸೀಮಿತಗೊಳಿಸಲಾಗಿದೆ. ದೇವಾಲಯದ ಹೊರಾಂಗಣದಲ್ಲಿ ಯಾವುದೇ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಇತ್ಯಾದಿಗಳನ್ನು ಆಚರಿಸಲು ನಿರ್ಭಂದವಿರುವದರಿಂದ ಜನವರಿ 20 ರಂದು ಬ್ರಹ್ಮ ರಥೋತ್ಸವ ಕಾರ್ಯಕ್ರಮ ಹಾಗು ಹೊರಾಂಗಣದ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ. ಕೇವಲ ಒಳಾಂಗಣದಲ್ಲಿ ಜಾತ್ರೆಯ ಪ್ರಯುಕ್ತ ಪೂಜಾ ಕಾರ್ಯಕ್ರಮಗಳು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು. ಅದೇ ರೀತಿ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳು ಕೋವಿಡ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ಸಹಕರಿಸಬೇಕೆಂದು ತಿಳಿಸಿದರು.ಜಾತ್ರಾ ಕಾರ್ಯಕ್ರಮವನ್ನು ದೇವಾಲಯದ ಒಳಾಂಗಣದಲ್ಲಿ ಧಾರ್ಮಿಕ ವಿಧಿ ವಿಧಾನ ಹಾಗೂ ಪೂಜಾ ಕಾರ್ಯಗಳಿಗೆ ಸೀಮಿತವಾಗಿ, ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸುತ್ತಿದ್ದು, ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ದ ಕಾನೂನೂ ಕ್ರಮ ಕೈಗೊಳ್ಳಲು ಹಾಗು ಯಾವುದೇ ಅಹಿತಕರ ಘಟನೆ ನಡೆಯದಂತೆ ಸರಳ ಹಾಗೂ ಶಾಂತಿಯುತವಾಗಿ ಆಚರಿಸಲು ಪೋಲಿಸ್ ಇಲಾಖೆಗೆ ಸೂಚಿಸಿದರು.ಸಭೆಯಲ್ಲಿ ಉಪಸ್ಥಿತರಿದ್ದ ಭಟ್ಕಳ ಉಪ ಪೊಲೀಸ್ ನಿರೀಕ್ಷಕರು ಹಾಗೂ ಗ್ರಾಮಾಂತರ ಪೊಲೀಸ್ ವೃತ್ತನಿರೀಕ್ಷಕರು ಈ ಬಗ್ಗೆ ಸೂಕ್ತ ಪೊಲೀಸ್ ಬಂದೋಬಸ್ತನೊಂದಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಮಾವಳ್ಳಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಾತನಾಡಿ ಬೆಳಿಗ್ಗೆ ಪಂಚಾಯತನಲ್ಲಿ ಜಾತ್ರೆ ಪ್ರಯುಕ್ತ ವಿಶೇಷ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಜಾತ್ರೆ ಕುರಿತು ಪಂಚಾಯತನಿಂದ ಯಾವುದೇ ಹಣಕಾಸಿನ ನೆರವು ನೀಡುವುದಿಲ್ಲ ಹಾಗೂ ಪಂಚಾಯತನಲ್ಲಿ ಅನುದಾನದ ಕೊರತೆ ಇರುವದರಿಂದ ಯಾವುದೇ ಮೂಲಭೂತ ಸೌಕರ್ಯ ಸಹ ಕಲ್ಪಿಸಲು ಸಾಧ್ಯವಿರುವುದಿಲ್ಲ ಎಂದು ತೀರ್ಮಾನಿಸಲಾಗಿದೆ ಹಾಗೂ ಜಾತ್ರೆ ಪ್ರಯುಕ್ತ ಸದಸ್ಯವಾರು ಒಂದು ಅಂಗಡಿ ತೆರೆಯುವದಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.ಇದಕ್ಕೆ ಸಹಾಯಕ ಆಯುಕ್ತೆ ಮಮತಾದೇವಿ ಅವರು ಕೋವಿಡ್ ಮಾರ್ಗಸೂಚಿಯನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಲು ಅವಕಾಶವಿಲ್ಲ. ಹಾಗೂ ಹೆಚ್ಚುವರಿ ಅಂಗಡಿ ಮಳಿಗೆಗಳನ್ನು ತೆರೆಯಲು ಸಹ ಅವಕಾಶವಿಲ್ಲ. ಇದರ ಉಲ್ಲಂಘನೆ ಆಗಿದ್ದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳುವಂತೆ ಪೊಲೀಸ ಇಲಾಖೆಗೆ ಸೂಚಿಸಿದರು. ಹಾಗೂ ಪಂಚಾಯತ ಸಭೆಯ ತೀರ್ಮಾನದ ಕುರಿತು ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಮೇಲಾಧಿಕಾರಿಗಳಿಗೆ ತಿಳಿಸಿ ಯಾವುದೇ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು.ಈ ಸಂಧರ್ಬದಲ್ಲಿ ತಹಸೀಲ್ದಾರ್ ಎಸ್. ರವಿಚಂದ್ರ, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಮಹಾಬಲೇಶ್ವರ ನಾಯ್ಕ, ಪಿಎಸೈ ರವೀಂದ್ರ ಬಿರಾದಾರ್, ಮುರುಡೇಶ್ವರ ದೇವಸ್ತಾನದ ಪರ ನಾಗರಾಜ ಎಚ್. ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಮಾವಳ್ಳಿ-1, 2 ಪಿಡಿಓ ಕುಮಾರ ನಾಯ್ಕ, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಮಾವಳ್ಳಿ ಕಂದಾಯ ನಿರೀಕ್ಷಕರ ಉಪಸ್ಥಿತರಿದ್ದರು.
Be the first to comment