ರಾಜ್ಯ ಸುದ್ದಿಗಳು
ದೇವನಹಳ್ಳಿ
ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೨೦೭ರಲ್ಲಿ ಬಿರುಸಿನ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವಿಶ್ವನಾಥಪುರ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಾಹೆಯಲ್ಲಿ ಅವಶ್ಯಕ ಅಂಡರ್‌ಪಾಸ್ ನಿರ್ಮಾಣವಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ಹೆದ್ದಾರಿ ಪ್ರಾಧಿಕಾರದಿಂದ ರಸ್ತೆ ಕಾಮಗಾರಿ ಈಗಾಗಲೇ ಹೆದ್ದಾರಿ ಅಗಲೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ವಿಶ್ವನಾಥಪುರ ಗ್ರಾಮದಿಂದ ಕೂಗಳತೆ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಜನರು, ರೋಗಿಗಳು ಬಂದು ಹೋಗುತ್ತಿರುತ್ತಾರೆ. ಅವೈಜ್ಞಾನಿಕ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದ್ದು, ಅದು ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸುಮಾರು ೨-೩ಕಿಮೀ ದೂರದಿಂದ ಬರಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬರಬೇಕಾದರೆ ಹೆಚ್ಚಿನ ತೊಂದರೆ ಅನುಭವಿಸಬೇಕಾಗುತ್ತದೆ. ಇಷ್ಟಲ್ಲದೆ, ಸಾಕಷ್ಟು ರೈತರು ಈ ಭಾಗದಲ್ಲಿದ್ದು, ಕೃಷಿಗೆ ತೆರಳುವ ರೈತರು ಸುತ್ತಿಬಳಸಿ ತೋಟಗಳಿಗೆ, ಹೊಲಗಳಿಗೆ ಹೋಗಬೇಕಾಗುತ್ತದೆ. ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಗಳನ್ನು ಮಾಡುತ್ತಾರೆ. ಆದರೆ ಸ್ಥಳೀಯವಾಗಿ ಗ್ರಾಮಸ್ಥರ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡು ಗ್ರಾಮಸ್ಥರಿಗೆ ಸ್ಪಂಧಿಸುವ ಕೆಲಸ ಮಾತ್ರ ಮಾಡುತ್ತಿಲ್ಲ. ಕೂಡಲೇ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಾಹೆಯಲ್ಲಿ ಅಂಡರ್‌ಪಾಸ್ ಮಾಡಿದರೆ ಸುಮಾರು 500ಕುಟುಂಬಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ. ಏನಾದರೂ ಅಂಡರ್‌ಪಾಸ್ ಆಗದೇ ಹೋದರೆ ಉಗ್ರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. …………….ಹೆದ್ದಾರಿಗೆ ಹೊಂದಿಕೊಂಡಿರುವ ಆಸ್ಪತ್ರೆ ರಸ್ತೆಗೆ ಸರ್ವೀಸ್ ರಸ್ತೆ ಅವಶ್ಯಕತೆ ಇರಲಿಲ್ಲ. ಸರ್ವೀಸ್ ರಸ್ತೆ ಬದಲಿಗೆ ಅಂಡರ್‌ಪಾಸ್ ಮಾಡಿದರೆ ಸಾಕಷ್ಟು ಅನುಕೂಲವಾಗುತ್ತದೆ. ಈಗಿರುವ ರಸ್ತೆ ಅವೈಜ್ಞಾನಿಕವಾಗಿದೆ. – ನಾರಾಯಣಸ್ವಾಮಿ | ಮಾಜಿ ಸದಸ್ಯರು, ವಿಶ್ವನಾಥಪುರ ಗ್ರಾಪಂ…………….ರಸ್ತೆ ಕಾಮಗಾರಿ ನಡೆಸುವ ಮುನ್ನವೇ ರಾಹೆ ಪ್ರಾಧಿಕಾರದ ಗಮನಕ್ಕೆ ತರಲಾಗಿದೆ. ಮನವಿಯನ್ನು ಸಹ ನೀಡಿದ್ದೇವೆ. ಅಧಿಕಾರಿಯನ್ನು ಕಳುಹಿಸಿಕೊಡುತ್ತೇನೆಂದು ಮೇಲಾಧಿಕಾರಿಗಳು ಹೇಳಿದ್ದಾರೆ. ಇದುವರೆಗೂ ಯಾರು ಬಂದಿಲ್ಲ. ಜ.19ರಂದು ಗ್ರಾಮಸ್ಥರೆಲ್ಲರೂ ಒಗ್ಗೂಡಿ ಉಗ್ರ ಹೋರಾಟ ಮಾಡುವ ತೀರ್ಮಾನ ಕೈಗೊಂಡಿದ್ದೇವೆ.– ರಾಮಮೂರ್ತಿ | ಮುಖಂಡ, ವಿಶ್ವನಾಥಪುರ ಗ್ರಾಮ
Be the first to comment