ರಾಜ್ಯ ಸುದ್ದಿಗಳು
ದೇವನಹಳ್ಳಿ
ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ದಿನೇದಿನೆ ಕೊರೊನಾ ಪಾಸಿಟೀವ್ ಪ್ರಕರಣಗಳು ಕಂಡುಬರುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರಭಾಗದಲ್ಲಿ ಬೆಳಿಗ್ಗೆಯಿಂದಲೇ ಜನರು ಕೋವಿಡ್ ಲಕ್ಷಣಗಳಿಂದ ತಪಾಸಣೆಗಾಗಿ ಬರುತ್ತಿದ್ದಾರೆ. ಕಾರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ 2 ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟೀವ್ ಆಗಿದ್ದು, ಕಾರಹಳ್ಳಿಯ ಶಾಲಾ ಮಕ್ಕಳಿಗೂ ಕೋವಿಡ್ ಪಾಸಿಟೀವ್ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಕಾರಹಳ್ಳಿ ಗ್ರಾಮದಲ್ಲಿ ಬಿಎಸ್‌ಎಫ್ ಕ್ಯಾಂಪಸ್ ಇರುವುದರಿಂದ ಬಿಎಸ್‌ಎಫ್ ಸಿಬ್ಬಂದಿಗಳು ಸಹ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಈಗಾಗಲೇ ಕಳೆದ ಎರಡು ದಿನಗಳಿಂದ 7-8 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಬಿಎಸ್‌ಎಫ್‌ನ 7 ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟೀವ್ ಬಂದಿದೆ. ದಿನವೂ 50-70 ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ದಿನವಿಡೀ ಜನರು ಬರುತ್ತಿದ್ದಾರೆ. ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಪಾಸಿಟೀವ್ ಪ್ರಕರಣ ಬರುತ್ತಲೇ ಇವೆ ಎಂದು ಆಸ್ಪತ್ರೆ ಸಿಬ್ಬಂದಿಗಳು ಹೇಳುತ್ತಿದ್ದಾರೆ.
ಒಟ್ಟು 28 ಕೋವಿಡ್ ಪಾಸಿಟೀವ್ ಪ್ರಕರಣಗಳು ಸಕ್ರಿಯಾವಾಗಿದ್ದರು, ಎಲ್ಲಾ ಪಾಸಿಟೀವ್ ಬಂದಿರುವವರಿಗೆ ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರಿಗೂ ಸಹ ಟೆಸ್ಟ್ ಮಾಡಿಸಲಾಗುತ್ತಿದ್ದು, ಪಾಸಿಟೀವ್ ಬಂದಿರುವ ಸೋಂಕಿತರ ಮೇಲೆ ಆರೋಗ್ಯ ಸಿಬ್ಬಂದಿಗಳು ದಿನವೂ ಸಂಪರ್ಕದಲ್ಲಿಟ್ಟುಕೊಂಡು ಆರೋಗ್ಯದ ಬಗ್ಗೆ ನಿಗಾವಹಿಸಲಾಗುತ್ತಿದೆ. ಯಾವುದೇ ರೀತಿಯ ಗಂಭೀರತೆ ಕಂಡುಬರುತ್ತಿಲ್ಲ. ಸಾಮಾನ್ಯ ಲಕ್ಷಣಗಳಾದ ಕೆಮ್ಮು, ಜ್ವರ, ಶೀತ ಕಂಡುಬರುತ್ತಿರುವ ರೋಗಿಗಳಿಗೆ ಕೋವಿಡ್ ಪಾಸಿಟಿವಿಟಿ ರಿಸಲ್ಟ್ ಬರುತ್ತಿದೆ ಎಂದು ಆಸ್ಪತ್ರೆ ವೈದ್ಯ ಡಾ.ಧನಂಜಯ್ ಹೇಳಿದರು.
Be the first to comment