ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ನೋಂದಣಿಗೊಂಡ ಸಂಘ, ಸಂಸ್ಥೆಗಳು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯನುಸಾರ ರಾಜ್ಯದಲ್ಲಿರುವ ಸಂಘ ಸಂಸ್ಥೆಗಳ ಚುನಾವಣೆ, ಉಪ ಚುನಾವಣೆಗಳನ್ನು ಕೋವಿಡ್-19 ನಿಯಮಗಳ ಪಾಲನೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸುವುದು ಕಷ್ಟಸಾಧ್ಯವಾಗಬಹುದು.
ಸದರಿ ಚುನಾವಣೆಗಳು ಜರುಗಿದಲ್ಲಿ ಸಾಂಕ್ರಾಮಿಕ ರೋಗವು ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಎಲ್ಲ ಸಂಘ ಸಂಸ್ಥೆಗಳ ಚುನಾವಣೆ, ಉಪ ಚುನಾವಣೆಗಳನ್ನು ಹಾಗೂ ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿರುವ ಪ್ರಕರಣಗಳಿಗೂ ಸಹ ಮಾರ್ಚ-22 ರ ಅಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೆ ಸರ್ಕಾರದ ಆದೇಶದ ಮೇರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment